ಚಿಕ್ಕಮರಳಿ ಸಂಪರ್ಕ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಪಾಂಡವಪುರ ತಾಲೂಕು ಚಿಕ್ಕಮರಳಿ ಗ್ರಾಮದಲ್ಲಿ 1.55 ಕೋಟಿ ರೂ.ವೆಚ್ಚದಲ್ಲಿ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿಪೂಜೆ ನೆರವೇರಿಸಿದರು.
ಪಾಂಡವಪುರ ತಾಲೂಕು ಚಿಕ್ಕಮರಳಿ ಗ್ರಾಮದಲ್ಲಿ 1.55 ಕೋಟಿ ರೂ.ವೆಚ್ಚದಲ್ಲಿ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿಪೂಜೆ ನೆರವೇರಿಸಿದರು.
Published on
ಪಾಂಡವಪುರ: ಹಲವು ವರ್ಷಗಳಿಂದ ನನೆಗುದಿಗೆ ಬಿದಿದ್ದ ತಾಲೂಕಿನ ಚಿಕ್ಕಮರಳಿ ಗ್ರಾಮದ ಸಂಪರ್ಕ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 1.55 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಸೋಮವಾರ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಮಂಡ್ಯ-ಪಾಂಡವಪುರ ಮುಖ್ಯ ರಸ್ತೆಯಿಂದ ಚಿಕ್ಕಮರಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಬಿದ್ದು ಅಧ್ವಾನಗೊಂಡಿತ್ತು. ರಸ್ತೆ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರು ಹಲವು ಬಾರಿ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.55 ಕೋಟಿ ರೂ.ಅನುದಾನ ಬಿಡುಗಡೆ ಮಾಡಿಸಿ ಮಡಿಕೆಪಟ್ಟಣ ಗೇಟ್‌ನಿಂದ ಚಿಕ್ಕಮರಳಿವರೆಗೆ 1.45 ಕಿಮೀ ಉದ್ದದ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ಸಲ್ಲಿಸಲಾಗಿದೆ. ಒತ್ತುವರಿಯಾದ ಕಾರಣ ಸರ್ವೇ ಮಾಡಿಸಿ ರಸ್ತೆಯನ್ನು 9 ಮೀಟರ್ ಅಗಲದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಉಳಿದಂತೆ ಚಿಕ್ಕಮರಳಿ ಗ್ರಾಮದಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆಯನ್ನು ಶೀಘ್ರ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಇದೇವೇಳೆ ಗ್ರಾಮಸ್ಥರು ಗ್ರಾಮದಲ್ಲಿ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಮೂಡಲೋಣಿ ರಸ್ತೆ ಅಭಿವೃದ್ಧಿಪಡಿಸುವಂತೆ ಹಾಗೂ ಅರ್ಧಕ್ಕೆ ನಿಂತಿರುವ ಕಾಂಕ್ರಿಟ್ ರಸ್ತೆ, ಜೆಜೆಎಂ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.
ಎಇಇ ಜೈಕುಮಾರ್, ಪಿಡಿಒ ರಾಜೇಂದ್ರ, ಕಾರ್ಯದರ್ಶಿ ಜಯರಾಮ್, ಗ್ರಾಪಂ ಮಾಜಿ ಅಧ್ಯಕ್ಷ ಸಿ.ಬಿ.ತಮ್ಮಣ್ಣ, ಮಾಜಿ ಉಪಾಧ್ಯಕ್ಷ ಈರಾಚಾರಿ, ಮುಖಂಡರಾದ ಸಿ.ಸ್ವಾಮಿಗೌಡ, ಪ್ರಕಾಶ್, ಸಿ.ಬಿ.ಸ್ವಾಮಿಗೌಡ, ಬಲರಾಮೇಗೌಡ, ಜಯರಾಮು, ರಘು, ನಾರಾಯಣ, ಸಿ.ಬಿ.ಶಂಕರ, ಸುರೇಶ್, ಕೆಂಪಶೆಟ್ಟಿ, ಕಿರಣ್, ಮಧುಸೂದನ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net