ನೀರಿನ ಲಭ್ಯತೆ ಅರಿತು ಬೆಳೆ ಬೆಳೆಯಿರಿ

ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ. ವೆಚ್ಚದ ನಾಲಾ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ನಗರಕೆರೆ ಸಂದೀಪ್, ಗೊರವನಹಳ್ಳಿ ರಾಘವ, ಹುಲಿಗೆರೆಪುರ ಮಹದೇವ, ಮಾದೇಗೌಡ, ರಾಜಶೇಖರ್, ಶಿವಮಾದು, ಬೋರೇಗೌಡ ಇದ್ದರು.

Published on
ಮದ್ದೂರು: ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಮಳೆಯಾಗದ ಪರಿಣಾಮ ಬರ ಆವರಿಸಿದ್ದು. ರೈತರು ಕೆಆರ್‌ಎಸ್ ಜಲಾಶಯದ ನೀರಿನ ಲಭ್ಯತೆ ನೋಡಿಕೊಂಡು ಬೆಳೆ ಬೆಳೆಯಬೇಕು ಎಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು.
ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದಿಂದ ಅಂದಾಜು 2 ಕೋಟಿ ರೂ. ವೆಚ್ಚದಲ್ಲಿ ನಾಲಾ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.
ಕೆಆರ್‌ಎಸ್ ಜಲಾಶಯದಲ್ಲಿ ಪ್ರಸ್ತುತ 107 ಅಡಿ ನೀರಿನ ಸಂಗ್ರಹವಿದ್ದು, ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಿದ್ದು, ಜನರಿಗೆ ಕುಡಿಯುವ ನೀರು ಹಾಗೂ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಬೇಕು. ರೈತರು ನೀರಿನ ಲಭ್ಯತೆ ನೋಡಿಕೊಂಡು ಬೆಳೆ ಬೆಳೆಯದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದರು.
ಈಗಾಗಲೇ ಮದ್ದೂರು ತಾಲೂಕಿನ ವಿಶ್ವೇಶ್ವರಯ್ಯ ನಾಲೆಯ ಕೊನೆ ಭಾಗಕ್ಕೂ ಸರಾಗವಾಗಿ ನೀರು ಹರಿಯುವಂತೆ ಹಂತ ಹಂತವಾಗಿ ನಾಲೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ರೈತರ ಬಹು ದೊಡ್ಡ ಸಮಸ್ಯೆಯಾಗಿರುವ ನಾಲೆಗಳ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುವುದು ಎಂದರು.
ಮುಖಂಡರಾದ ನಗರಕೆರೆ ಸಂದೀಪ್, ಗೊರವನಹಳ್ಳಿ ರಾಘವ, ಹುಲಿಗೆರೆಪುರ ಮಹದೇವ, ಮಾದೇಗೌಡ, ರಾಜಶೇಖರ್, ಶಿವಮಾದು, ಬೋರೇಗೌಡ, ಕಾವೇರಿ ನೀರಾವರಿ ನಿಗಮದ ಎಇಇ ನಾಗರಾಜು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net