ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಎಚ್‌ಡಿಕೆ ಅನುದಾನ ಬಿಡುಗಡೆ

ಮಳವಳ್ಳಿ ಕಾರ್ಖಾನೆ ಶಾಲೆ ಆವರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿಸಿದ್ದ ಸಿಎಸ್‌ಆರ್ ಅನುದಾನದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುರುವಾರ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಶಾಲಾ ವಿದ್ಯಾರ್ಥಿಗಳಿಂದ ಭೂಮಿಪೂಜೆ ನೆರವೇರಿಸಿದರು. ಶ್ರೀನಿವಾಸ್, ರವಿ ಕಂಸಾಗರ, ಹನುಮಂತು, ಟಿ.ನಂದಕುಮಾರ್, ಪ್ರಶಾಂತ್, ಮೆಹಬೂಬ್ ಪಾಷ, ಪದ್ಮಮ್ಮ,ನಾಗೇಶ್ ಇದ್ದರು.
ಮಳವಳ್ಳಿ ಕಾರ್ಖಾನೆ ಶಾಲೆ ಆವರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿಸಿದ್ದ ಸಿಎಸ್‌ಆರ್ ಅನುದಾನದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುರುವಾರ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಶಾಲಾ ವಿದ್ಯಾರ್ಥಿಗಳಿಂದ ಭೂಮಿಪೂಜೆ ನೆರವೇರಿಸಿದರು. ಶ್ರೀನಿವಾಸ್, ರವಿ ಕಂಸಾಗರ, ಹನುಮಂತು, ಟಿ.ನಂದಕುಮಾರ್, ಪ್ರಶಾಂತ್, ಮೆಹಬೂಬ್ ಪಾಷ, ಪದ್ಮಮ್ಮ,ನಾಗೇಶ್ ಇದ್ದರು.
Published on
ಮಳವಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಅವರು ಸಿಎಸ್‌ಆರ್ ಅನುದಾನದಲ್ಲಿ ಬಿಡುಗಡೆ ಮಾಡಿರುವ 65 ಲಕ್ಷ ರೂ. ವೆಚ್ಚದಲ್ಲಿ ಎರಡು ಸರ್ಕಾರಿ ಶಾಲೆಗಳಲ್ಲಿ ತಲಾ ಎರಡು ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.
ಪಟ್ಟಣದ ಕಾರ್ಖಾನೆ ಶಾಲಾ ಆವರಣದಲ್ಲಿ ಗುರವಾರ ಆಯೋಜಿಸಲಾಗಿದ್ದ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಾಲಾ ಮಕ್ಕಳಿಂದ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳ ಹಾವಳಿ ನಡುವೆಯೂ ಇಲ್ಲಿನ ಸರ್ಕಾರಿ ಶಾಲೆಯಲ್ಲಿ 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದು ಖುಷಿಯ ಸಂಗತಿಯಾಗಿದೆ. ಇದೇ ರೀತಿ ಮತ್ತೊಂದು ಮಾದರಿ ಶಾಲೆಯನ್ನು ಗುರುತಿಸಿ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶಾಲೆಗೆ ಎರಡು ಕೊಠಡಿ ನಿರ್ಮಾಣಕ್ಕೆ ಅನುದಾನ ನೀಡಿದ್ದಾರೆ ಎಂದರು.
ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಈಗಾಗಲೇ ಪ್ರಧಾನಿ ಅವರ ಪ್ರೋತ್ಸಾಹದೊಂದಿಗೆ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ಕೈಗಾರಿಕೆ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಅನುಮೋದನೆ ಕೊಡಿಸಿದ್ದಾರೆ ಎಂದರು. ಅದಲ್ಲದೆ ತಾಲೂಕಿನ 10 ಗ್ರಾಮಗಳಲ್ಲಿ ಹೈಮಾಸ್ಟ್ ದೀಪ ಅಳವಡಿಕೆ, ಸಿಎಸ್‌ಆರ್ ಅನುದಾನದಲ್ಲಿ 20ಕ್ಕೂ ಹೆಚ್ಚು ಬಸ್ ತಂಗುದಾಣಗಳ ನಿರ್ಮಾ ಣಕ್ಕೆ ಅನುದಾನ ಮಂಜೂರು ಮಾಡಿಸಿರುವ ಕುಮಾರಸ್ವಾಮಿ ಅವರಿಗೆ ತಾಲೂಕಿನ ಜನತೆ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಮನ್ವಯಾಧಿಕಾರಿ ಶ್ರೀನಿವಾಸ್. ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ರವಿ ಕಂಸಾಗರ, ಜಿಪಂ ಮಾಜಿ ಸದಸ್ಯ ಹನುಮಂತು, ಪುರಸಭೆ ಮಾಜಿ ಉಪಾಧ್ಯಕ್ಷರಾದ ಟಿ.ನಂದಕುಮಾರ್, ಪ್ರಶಾಂತ್, ಮಾಜಿ ಸದಸ್ಯ ಮೆಹಬೂಬ್ ಪಾಷ, ಮುಖಂಡರಾದ ಆನಂದ್, ಮೆಡಿಕಲ್ ಕುಮಾರ, ನಾಗೇಶ್, ಅನಂತು, ದುಗ್ಗನಹಳ್ಳಿ ನಾಗರಾಜು, ಮಾದೇಶ, ಮಹಿಳಾ ಘಟಕದ ಅಧ್ಯಕ್ಷೆ ಪದ್ಮಮ್ಮ, ಬಾಲಕಿಯರ ಪ್ರೌಢಶಾಲೆ ಮುಖ್ಯಶಿಕ್ಷಕ ಕುಮಾರಸ್ವಾಮಿ , ಕಾರ್ಖಾನೆ ಶಾಲೆಯ ಮುಖ್ಯಶಿಕ್ಷಕಿ ನಾಗರತ್ನಾ, ಎಸ್‌ಡಿಎಂಸಿ ಅಧ್ಯಕ್ಷ ಹರೀಶ್, ಕಂಪನಿ ಇಂಜಿನಿಯರ್ ಆನಂದ್ ಸೇರಿದಂತೆ ಹಲವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net