ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯ ಎಸ್‌ವಿಎಂ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ಸರಸ್ವತಿ ಪೂಜೆ, ಯುಕೆಜಿ ಮಕ್ಕಳಿಗೆ ಗ್ರಾಜುಯೇಷನ್ ಡೇ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಉದ್ಘಾಟಿಸಿದರು. ಹನುಮಂತು, ಎಸ್.ನಾರಾಯಣ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Published on:
Copied
Follow Us
ಮದ್ದೂರು:ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಎಸ್.ವಿ. ಎಂ.ಇಂಟರ್ ನ್ಯಾಷನಲ್ ಸ್ಕೂಲ್‌ನ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ತಿಳಿಸಿದರು.
ತಾಲೂಕಿನ ಹೆಮ್ಮನಹಳ್ಳಿಯ ಎಸ್.ವಿ.ಎಂ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಶನಿವಾರ ಆಯೋಜಿಸಿದ್ದ ಸರಸ್ವತಿ ಪೂಜೆ, ಯುಕೆಜಿ ಮಕ್ಕಳಿಗೆ ಗ್ರಾಜುಯೇಷನ್ ಡೇ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಗ್ರಾಜುಯೇಷನ್ ಡೇ ಎಂದರೆ ಕೇವಲ ಪ್ರಮಾಣಪತ್ರ ಪಡೆಯುವುದಲ್ಲ, ಬದಲಾಗಿ ಜ್ಞಾನದ ಅನ್ವೇಷಣೆಯನ್ನು ಮುಂದುವರಿಸಲು ಮತ್ತು ಸಮಾಜಕ್ಕೆ ತಮ್ಮದೆಯಾದ ಅಮೂಲ್ಯ ಕೊಡುಗೆ ನೀಡಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಒಂದು ಪ್ರಕ್ರಿಯೆ ಎಂದರು.
ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮ ಮತ್ತು ಬದ್ಧತೆಯ ಫಲವನ್ನು ಪಡೆದು. ನೈತಿಕತೆ ಮತ್ತು ಪ್ರಾಮಾಣಿಕತೆಯಿಂದ ವೃತ್ತಿ ಜೀವನವನ್ನು ಮುನ್ನಡೆಸುವ ಮೂಲಕ ಸಮಾಜದಲ್ಲಿ ನೊಂದವರ ಬಾಳಿಗೆ ಆಸರೆಯಾಗಬೇಕೆಂದು ಕಿವಿಮಾತು ಹೇಳಿದರು.
ಎಸ್‌ವಿಎಂ ಇಂಟರ್ ನ್ಯಾಷನಲ್ ಸ್ಕೂಲ್‌ನ ಆಡಳಿತ ಮಂಡಳಿ ನುರಿತ ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಜತೆಗೆ ಕ್ರೀಡೆ, ವಿಜ್ಞಾನ, ಪಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಮಾಡಿ ಅವರಲ್ಲಿರುವ ಪ್ರತಿಭೆಯನ್ನು ಹೊರ ತಂದು ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ಒದಗಿಸುತ್ತಿರುವುದು ಶಾಲೆಯ ಹೆಗ್ಗಳಿಕೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಸಂಸ್ಥೆಯ ಅಧ್ಯಕ್ಷೆ ರೂಪಾ ದೇವರಾಜು, ಸಿಆರ್‌ಪಿ ಹನುಮಂತು, ಕೆನರಾ ಬ್ಯಾಂಕ್‌ನ ಎಸ್.ನಾರಾಯಣ್, ಮುಖ್ಯಶಿಕ್ಷಕ ಸುಬ್ರಹ್ಮಣ್ಯ, ಸಹ ಶಿಕ್ಷಕರಾದ ರಶ್ಮಿತಾ, ವಿನೋದ್, ಶ್ರುತಿ, ಜಯವಾಣಿ, ನಿಶ್ಚಿತಾ, ದೀಪಿಕಾ, ರಂಗನಾಥ್, ಮಮತಾ, ಕಾವ್ಯಾ, ಸುಪ್ರೀತಾ, ಪ್ರೀತಿ ಇದ್ದರು.