ಚಂದ್ರವನ ಆಶ್ರಮದಲ್ಲಿ ಆರೋಗ್ಯ ಶಿಬಿರ

ಪಟ್ಟಣ ಹೊರವಲಯದ ಪಶ್ಚಿಮವಾಹಿನಿಯ ಚಂದ್ರವನ ಆಶ್ರಮದಲ್ಲಿ 161ನೇ ಬೆಳದಿಂಗಳ ದೀಪಾರತಿ, ಧಾರ್ಮಿಕ ಕಾರ್ಯಕ್ರಮ ಮತ್ತು ಆದಿ ಆರೋಗ್ಯ ಆಶ್ರಮ ಆಯುರ್ವೇದ ಆಸ್ಪತ್ರೆಯಲ್ಲಿ 3ನೇ ಸ್ವಾಸ್ಥ್ಯ ವೀಣಾ ಕಾಶಪ್ಪನವರ್ ಉದ್ಘಾಟಿಸಿದರು. ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಇತರರು ಇದ್ದರು.
ಪಟ್ಟಣ ಹೊರವಲಯದ ಪಶ್ಚಿಮವಾಹಿನಿಯ ಚಂದ್ರವನ ಆಶ್ರಮದಲ್ಲಿ 161ನೇ ಬೆಳದಿಂಗಳ ದೀಪಾರತಿ, ಧಾರ್ಮಿಕ ಕಾರ್ಯಕ್ರಮ ಮತ್ತು ಆದಿ ಆರೋಗ್ಯ ಆಶ್ರಮ ಆಯುರ್ವೇದ ಆಸ್ಪತ್ರೆಯಲ್ಲಿ 3ನೇ ಸ್ವಾಸ್ಥ್ಯ ವೀಣಾ ಕಾಶಪ್ಪನವರ್ ಉದ್ಘಾಟಿಸಿದರು. ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಇತರರು ಇದ್ದರು.
Published on
ಶ್ರೀರಂಗಪಟ್ಟಣ: ಸಮಾಜದ ಹಿತಾಸಕ್ತಿ ಜತೆಗೆ ಜನರ ಸದೃಢ ಆರೋಗ್ಯಕ್ಕೆ ಚಂದ್ರವನ ಆಶ್ರಮ ಒತ್ತು ನೀಡಿದ್ದು, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿದೆ ಎಂದು ಪೀಠಾಧಿಪತಿ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಹೇಳಿದರು.
ಪಟ್ಟಣ ಹೊರವಲಯದ ಪಶ್ಚಿಮವಾಹಿನಿಯ ಚಂದ್ರವನ ಆಶ್ರಮದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ 161ನೇ ಬೆಳದಿಂಗಳ ದೀಪಾರತಿ, ಧಾರ್ಮಿಕ ಕಾರ್ಯಕ್ರಮ ಮತ್ತು ಆದಿ ಆರೋಗ್ಯ ಆಶ್ರಮ ಆಯುರ್ವೇದ ಆಸ್ಪತ್ರೆಯಲ್ಲಿ 3ನೇ ಸ್ವಾಸ್ಥ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಲೋಕ ಕಲ್ಯಾಣರ್ಥ ಈ ಜನರಿಂದ, ಜನರಿಗಾಗಿ, ಜನರಿಗೋಸ್ಕರ ಎಂಬ ಶೀರ್ಷಿಕೆಯಡಿ ಸಾರ್ವಜನಿಕರ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ 3 ದಿನಗಳ ಸ್ವಾಸ್ಥ್ಯ ಶಿಬಿರವನ್ನು ಏರ್ಪಡಿಸಿದ್ದು, ಶಿಬಿರದಲ್ಲಿ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕೆಂಬುದನ್ನು ವಿವಿಧ ಚಿಕಿತ್ಸೆಗಳ ಮೂಲಕ ತಿಳಿಸಿಕೊಡಲಾಗುವುದೆಂದು ತಿಳಿಸಿದರು.
ಬೆಳಗಾವಿಯ ಹುಕ್ಕೇರಿಯ ಶ್ರೀಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇಂದಿನ ದಿನಮಾನದಲ್ಲಿ ಪ್ರತಿಯೊಬ್ಬರು ಆರೋಗ್ಯವನ್ನು ಸಮಸ್ಥಿತಿಯಲ್ಲಿಟ್ಟುಕೊಳ್ಳಲು ಇಂತಹ ಸ್ವಾಸ್ಥ್ಯ ಶಿಬಿರದಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.
ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷೆ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಮೈಸೂರಿನ ಸಿವಿಲ್ ನ್ಯಾಯಾಧೀಶೆ ಶಿಲ್ಪ ಹಾಗೂ ಬೆಂಗಳೂರಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಅ.ಭಾ.ವೀ.ಲಿಂ.ಮ. ಸಭಾದ ಅಧ್ಯಕ್ಷ ಎಸ್.ಸುರೇಶ್, ಕ್ಷಣಾಂಬಿಕ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಶಾಸ್ತ್ರಿ, ಜಿಲ್ಲೆಯ ಅ.ಭಾ.ವೀ.ಲಿಂ.ಮ.ಸಭಾದ ಅಧ್ಯಕ್ಷ ತಾಳಶಾಸನ ಆನಂದ್, ಡಾ.ಎಂ.ಎಸ್. ಮಧುಮತಿ, ಡಾ.ಎನ್.ನಾಗೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net