ಹೊಳೆ ಆಂಜನೇಯನಿಗೆ ಜೇನು ಅಭಿಷೇಕ

ಜ್ಯೇಷ್ಠ ಹುಣ್ಣಿಮೆ ಅಂಗವಾಗಿ ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿರುವುದು.
ಜ್ಯೇಷ್ಠ ಹುಣ್ಣಿಮೆ ಅಂಗವಾಗಿ ಮದ್ದೂರು ನಗರದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕ ಮಾಸದ ಜ್ಯೇಷ್ಠ ಹುಣ್ಣಿಮೆ ಪ್ರಯುಕ್ತ
ಮದ್ದೂರು: ನಗರದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಅಧಿಕ ಮಾಸದ ಜ್ಯೇಷ್ಠ ಹುಣ್ಣಿಮೆ ಅಂಗವಾಗಿ ದೇವರಿಗೆ 108 ಕೆಜಿ ಮಧು (ಜೇನು) ಅಭಿಷೇಕ ಹಾಗೂ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮುಂಜಾನೆಯಿಂದಲ್ಲೆ ದೇಗುಲದಲ್ಲಿ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಮೂಲ ಪ್ರಾಣ ದೇವರಿಗೆ ಮಧು (ಜೇನು) ಅಭಿಷೇಕ ಮಾಡಲಾಯಿತು. ನಂತರ ದೇವರಿಗೆ ವಿವಿಧ ಹೂಗಳಿಂದ ವಿಶೇಷ ಅಲಂಕಾರ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ವಿಶೇಷ ಪೂಜಾ ಕಾರ್ಯಕ್ರಮ ನಡೆದವು. ನಂತರ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.
ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾಧಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ದೇಗುಲದ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ಮಾತನಾಡಿ, ಅಧಿಕ ಮಾಸದ ಅಂಗವಾಗಿ ಹಾಗೂ ಲೋಕ ಕಲ್ಯಾಣಕ್ಕಾಗಿ ಬೆಂಗಳೂರಿನ ಭಕ್ತರಾದ ಗೋವಿಂದಸ್ವಾಮಿ ಪೂರ್ಣಿಮ ದಂಪತಿ 108 ಕೆಜಿ ಜೇನು ಅಭಿಷೇಕ ಮಾಡಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದರು.
ಹಿಂದೂ ಧರ್ಮದಲ್ಲಿ ಅಧಿಕ ಮಾಸ ಹುಣ್ಣಿಮೆಗೆ ವಿಶೇಷ ಮಹತ್ವವಿದೆ. ಮೂರು ವರ್ಷಕ್ಕೊಮ್ಮೆ ಬರುವ ಈ ಪೂರ್ಣಿಮೆಯ ದಿನದಂದು ದಾನ-ಧರ್ಮ ಮಾಡುವುದರಿಂದ ಅಪಾರ ಸಂಪತ್ತು, ಸುಖ ಹಾಗೂ ಸಮೃದ್ಧಿ ಪ್ರಾಪ್ತಿಯಾಗುತ್ತದೆಂಬ ನಂಬಿಕೆಯಿದೆ ಎಂದರು.
ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿಗೆ ಭಕ್ತರು ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸಿದರೆ. ಭಕ್ತರ ಇಷ್ಟಾರ್ಥಗಳನ್ನು ಈಡೇರುವುದರಲ್ಲಿ ಯಾವುದೇ ಸಂಶಯವಿಲ್ಲ. ಆದ್ದರಿಂದ ಜಿಲ್ಲೆ ಸೇರಿದಂತೆ ರಾಜ್ಯ ವಿವಿಧ ಭಾಗಗಳಲ್ಲಿ ಅಸಂಖ್ಯಾತ ಭಕ್ತ ವೃಂದವೇ ಇಲ್ಲಿಗೆ ಬರುವುದು ವಿಶೇಷ ಎಂದರು.
ಸಹಾಯಕ ಅರ್ಚಕ ಸುರೇಶ್‌ಆಚಾರ್ಯ ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net