ನಾಗಮಂಗಲ ತಾಲೂಕಿನಲ್ಲಿ ಹೊನ್ನೇರು ಸಂಭ್ರಮ

ನಾಗಮಂಗಲ ತಾಲೂಕಿನ ಮಠದಭೂವನಹಳ್ಳಿ ಗ್ರಾಮಸ್ಥರು ಸಂಪ್ರದಾಯದಂತೆ ಹೊನ್ನೇರು ಕಟ್ಟಿ ಬೇಸಾಯ ಕಾರ್ಯಕ್ಕೆ ಚಾಲನೆ ನೀಡಿದರು.
ನಾಗಮಂಗಲ ತಾಲೂಕಿನ ಮಠದಭೂವನಹಳ್ಳಿ ಗ್ರಾಮಸ್ಥರು ಸಂಪ್ರದಾಯದಂತೆ ಹೊನ್ನೇರು ಕಟ್ಟಿ ಬೇಸಾಯ ಕಾರ್ಯಕ್ಕೆ ಚಾಲನೆ ನೀಡಿದರು.
Published on
ನಾಗಮಂಗಲ: ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಯುಗಾದಿ ಹಬ್ಬದ ದಿನವಾದ ಗುರುವಾರ ಹೊನ್ನೇರು ಕಟ್ಟುವ ಆಚರಣೆ ಸಂಭ್ರಮದಿಂದ ನಡೆಯಿತು.
ತಾಲೂಕಿನ ಕರಡಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಶ್ರೀಪರಾಭವ ನಾಮ ಸಂವತ್ಸರದ ಹೊಸ ಪಂಚಾಂಗವನ್ನು ನೋಡಿದ ಗ್ರಾಮದ ಮುಖ್ಯಸ್ಥರು, ಒಂದೇ ಹೆಸರಿನ ಮೂವರನ್ನು ಆಯ್ಕೆ ಮಾಡಿ, ಅವರೊಂದಿಗೆ ಗ್ರಾಮದ ಶ್ರೀ ಬೋರೇದೇವರ ದೇವಸ್ಥಾನದ ಮುಂಭಾಗದಲ್ಲಿರುವ ಗರುಡಕಂಭದ ಮುಂದೆ ಮೂರು ಜೊತೆ ಸಿಂಗರಿಸಿದ ಎತ್ತುಗಳಿಗೆ ಮೊದಲು ಪೂಜೆ ಸಲ್ಲಿಸಲಾಯಿತು. ನಂತರ ತಮಟೆ ಸದ್ದಿನೊಂದಿಗೆ ನೇಗಿಲು ಹೊತ್ತ ಮೂವರು ರೈತರು ಎತ್ತುಗಳೊಂದಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕಿದರು. ನಂತರ ಮೂರು ಜೊತೆ ಎತ್ತುಗಳಿಗೆ ನೇಗಿಲು ಕಟ್ಟಿ ಗ್ರಾಮದ ಸುತ್ತಲೂ ಉಳುಮೆ ಮಾಡುವ ಮೂಲಕ ವರ್ಷದ ಕೃಷಿ ಚಟುವಟಿಕೆಗೆ ಮುನ್ನುಡಿ ಬರೆದರು.
ಈ ವಿಶಿಷ್ಟ ಆಚರಣೆಯನ್ನು ಪೂರ್ವಿಕರಿಂದ ನಡೆಸಿಕೊಂಡು ಬಂದಿದ್ದು, ಇಂದಿಗೂ ಅದನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಈ ವರ್ಷ ಉತ್ತಮ ಮಳೆ, ಬೆಳೆಯಾಗಿ ರೈತರ ಬಾಳು ಹಸನಾಗಲಿ ಎಂಬ ಉದ್ದೇಶದಿಂದ ಈ ಹೊನ್ನೇರು ಆಚರಣೆ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದರು. ತಾಲೂಕಿನ ಮಠದ ಭೂವನಹಳ್ಳಿ, ಬೋಗಾದಿ, ಕರಡಹಳ್ಳಿ ಸೇರಿದಂತೆ ಬಹುತೇಕ ಹಳ್ಳಿಗಳಲ್ಲಿ ಹೊನ್ನೇರು ಆಚರಣೆ ನಡೆಯಿತು. ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ ಈ ವಿಶಿಷ್ಟ ಆಚರಣೆ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net