ಚಿಕ್ಕಬಾಗಿಲಿನಲ್ಲಿ ಮಳೆಗೆ ಮನೆ ಗೋಡೆ ಕುಸಿತ

ಮಳವಳ್ಳಿ ತಾಲೂಕಿನ ಚಿಕ್ಕಬಾಗಿಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿದೆ.
ಮಳವಳ್ಳಿ ತಾಲೂಕಿನ ಚಿಕ್ಕಬಾಗಿಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿದೆ.
Published on

ಪ್ರಮುಖ ಮುಖ್ಯಾಂಶಗಳು

  • ತಪ್ಪಿದ ಭಾರಿ ಅನಾಹುತ
ಮಳವಳ್ಳಿ : ತಾಲೂಕಿನ ಬಿ.ಜಿ.ಪುರ ಹೋಬಳಿಯ ಚಿಕ್ಕಬಾಗಿಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಗ್ರಾಮದ ನಿವಾಸಿ ಮಹದೇವಪ್ಪ ಅವರ ಹಳೆಯ ಮಣ್ಣಿನ ಮನೆಯ ಗೋಡೆ ನಿರಂತರ ಮಳೆಗೆ ನೆನೆದು ಮಂಗಳವಾರ ರಾತ್ರಿ ಏಕಾಏಕಿ ಕುಸಿದಿದೆ. ಘಟನೆ ಸಂಭವಿಸಿದ ವೇಳೆ ಮನೆಯೊಳಗಿನ ಮತ್ತೊಂದು ಭಾಗದಲ್ಲಿ ಕುಟುಂಬದವರು ಮಲಗಿದ್ದ ಕಾರಣ ಭಾರಿ ದುರಂತ ತಪ್ಪಿದೆ. ಮನೆಯೊಳಗಿದ್ದ ಪಾತ್ರೆ- ಎಲೆಕ್ಟ್ರಾನಿಕ್ ಹಾಗೂ ದಿನಬಳಕೆ ವಸ್ತುಗಳು ಮಣ್ಣಿನಡಿ ಸಿಲುಕಿ ಹಾನಿಯಾಗಿವೆ.
ಹಲವು ದಿನಗಳಿಂದ ತಾಲೂಕಿನಾದ್ಯಂತ ಮಳೆ ಇಲ್ಲದೆ ಕಂಗಾಲಾಗಿದ್ದ ಜನರಿಗೆ ಕಳೆದ ರಾತ್ರಿ ವರುಣ ದಿಢೀರ್ ಆರ್ಭಟಿಸಿದೆ. ಚಿಕ್ಕಬಾಗಿಲು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ವಿಷಯ ತಿಳಿದು ಬುಧವಾರ ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net