ಸಾಸಲು ದೇಗುಲದ ಹುಂಡಿಯಲ್ಲಿ 16.66ಲಕ್ಷ ರೂ. ಸಂಗ್ರಹ

ಕಿಕ್ಕೇರಿ ಹೋಬಳಿಯ ಸಾಸಲು ಗ್ರಾಮದ ಶ್ರೀ ಸೋಮೇಶ್ವರ ಮತ್ತು ಶ್ರೀ ಶಂಭುಲಿಂಗೇಶ್ವರ ದೇವಾಲಯದ ಹುಂಡಿ ಎಣಿಕೆ ಸಂದರ್ಭ ಉಪ ತಹಸೀಲ್ದಾರ್ ವೀಣಾ, ರಾಜಸ್ವ ನಿರೀಕ್ಷಕ ಡಿ. ಆರ್. ನರೇಂದ್ರ, ಗ್ರಾಮ ಆಡಳಿತಾಧಿಕಾರಿ ತಿಪ್ಪೇಶ್ ಇತರರು ಇದ್ದರು.
ಕಿಕ್ಕೇರಿ ಹೋಬಳಿಯ ಸಾಸಲು ಗ್ರಾಮದ ಶ್ರೀ ಸೋಮೇಶ್ವರ ಮತ್ತು ಶ್ರೀ ಶಂಭುಲಿಂಗೇಶ್ವರ ದೇವಾಲಯದ ಹುಂಡಿ ಎಣಿಕೆ ಸಂದರ್ಭ ಉಪ ತಹಸೀಲ್ದಾರ್ ವೀಣಾ, ರಾಜಸ್ವ ನಿರೀಕ್ಷಕ ಡಿ. ಆರ್. ನರೇಂದ್ರ, ಗ್ರಾಮ ಆಡಳಿತಾಧಿಕಾರಿ ತಿಪ್ಪೇಶ್ ಇತರರು ಇದ್ದರು.
Published on
ಕಿಕ್ಕೇರಿ : ಹೋಬಳಿಯ ಸಾಸಲು ಗ್ರಾಮದ ಶ್ರೀ ಸೋಮೇಶ್ವರ, ಶ್ರೀ ಶಂಭುಲಿಂಗೇಶ್ವರ ದೇಗುಲಗಳ ಹುಂಡಿ ಎಣಿಕೆ ಕಾರ್ಯ ತಹಸೀಲ್ದಾರ್ ಎಸ್.ಯು. ಅಶೋಕ್ ಮಾರ್ಗದರ್ಶನದಲ್ಲಿ
ನಡೆಯಿತು. ಎಣಿಕೆ ಸಂದರ್ಭ ಎರಡೂ ದೇಗುಲಗಳಿಂದ ಒಟ್ಟು 16 ಹುಂಡಿ ಯನ್ನು ತೆರೆದು ಎಣಿಕೆ ಮಾಡಿದಾಗ ಒಟ್ಟು 16,66,746 ರೂ. ನಗದು ಸಂಗ್ರಹವಾಗಿತ್ತು. ಈ ಹಣವನ್ನು ಕೆ.ಆರ್. ಪೇಟೆ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ಮಜಾ ಮಾಡಲಾಯಿತು.
ಉಪ ತಹಸೀಲ್ದಾರ್ ವೀಣಾ, ರಾಜಸ್ವ ನಿರೀಕ್ಷಕ ಡಿ. ಆರ್. ನರೇಂದ್ರ, ಗ್ರಾಮ ಆಡಳಿತಾಧಿಕಾರಿ ತಿಪ್ಪೇಶ್, ಸುನೀಲ್ ಗಾಣಿಗೇರ್, ವನಜಾಕ್ಷಿ, ಗ್ರಾಮ ಸಹಾಯಕರು, ಬ್ಯಾಂಕ್ ಆಫ್ ಬರೋಡಾ ಸಿಬ್ಬಂದಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net