ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ತಲೆದಂಡ ನಿಶ್ಚಿತ

ಮದ್ದೂರು ನಗರದ ಎಸ.ಎಂ. ಕೃಷ್ಣ ಸಭಾಂಗಣದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಕೆ.ಎಂ.ಉದಯ್ ಮಾತನಾಡಿದರು. ರಾಧಿಕಾ, ಸುರೇಶ್ ಇದ್ದರು.
ಮದ್ದೂರು ನಗರದ ಎಸ.ಎಂ. ಕೃಷ್ಣ ಸಭಾಂಗಣದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಕೆ.ಎಂ.ಉದಯ್ ಮಾತನಾಡಿದರು. ರಾಧಿಕಾ, ಸುರೇಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್ ಎಚ್ಚರಿಕೆ
  • ಮದ್ದೂರಲ್ಲಿ ಪೌರಕಾರ್ಮಿಕರು, ಅಧಿಕಾರಿಗಳ ಸಭೆ
ಮದ್ದೂರು: ನಗರಸಭೆ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕಸ ವಿಲೇವಾರಿ, ಕುಡಿಯುವ ನೀರಿನ ಸಮಸ್ಯೆ, ಬೀದಿ ದೀಪ ನಿರ್ವಹಣೆ ಸೇರಿ ಇನ್ನಿತರ ಹಲವು ಸಮಸ್ಯೆ ಸಂಬಂಧ ಸಾರ್ವಜನಿಕರಿಂದ ಸಾಕಷ್ಟು ದೂರು ಕೇಳಿ ಬರುತ್ತಿದ್ದು, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ. ಉದಯ್ ಎಚ್ಚರಿಸಿದರು.
ನಗರದ ಎಸ್.ಎಂ. ಕೃಷ್ಣ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪೌರ ಕಾರ್ಮಿಕರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸಂಬಂಧಿಸಿದವರು ಸಮರ್ಪಕವಾಗಿ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಪ್ರತಿ ವಾರ್ಡ್‌ಗಳಲ್ಲಿ ಒಂದಿಲ್ಲ ಒಂದು ಸಮಸ್ಯೆ ಕಂಡು ಬರುತ್ತಿವೆ. ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗದಿದ್ದರೆ ತಲೆತಂಡ ಖಚಿತ ಎಂದು ಎಚ್ಚರಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಂಡುಬರುತ್ತಿದೆ. ಹಸಿಕಸ ಒಣ ಕಸವನ್ನು ಆಟೋ, ಟಿಪ್ಪರ್ ಮೂಲಕ ಸಂಗ್ರಹಿಸಲು ವಿಳಂಬವಾಗುತ್ತಿದ್ದು, ಇದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು.
ವಾಹನ ಚಾಲಕರು ಪ್ರತಿ ಬೀದಿಗಳಿಗೂ ತೆರಳಿ ಕಸ ಸಂಗ್ರಹಣೆ ಮಾಡುವ ಮೂಲಕ ಸುಂದರ ನಗರವನ್ನನ್ನಾಗಿಸಲು ಕೈಜೋಡಿಸಬೇಕಿದೆ ಎಂದರು.
ಹಲವು ಬಡಾವಣೆಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಸ್ಥಳೀಯರು ದಿನನಿತ್ಯ ಪರದಾಡುವಂತಾಗಿದೆ. ಕೆಲವು ವಾರ್ಡ್‌ಗಳಲ್ಲಿ ಕೊಳವೆಬಾವಿಗಳು ಕೆಟ್ಟು ಹಲವು ತಿಂಗಳುಗಳೇ ಕಳೆದಿದ್ದರೂ ದುರಸ್ತಿಗೆ ಮುಂದಾಗದಿರುವುದಕ್ಕೆ ಕಾರಣವೇನು ಎಂದು ರಂ ಆದರು.
ಸಂಬಂಧಿಸಿದ ಅಧಿಕಾರಿಗಳು ಪ್ರತಿ ವಾರ್ಡ್‌ಗಳಿಗೆ ಭೇಟಿ ನೀಡಿ ಕಸ ವಿಲೇವಾರಿ ಕುಡಿಯುವ ನೀರು, ಬೀದಿ ದೀಪ ನಿರ್ವಹಣೆ ಇನ್ನಿತರ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದು ತ್ವರಿತ ಗತಿಯಲ್ಲಿ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.
ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿರುವ ಗ್ರಾಮಗಳಿಗೂ ಸೌಲಭ್ಯ ಕಲ್ಪಿಸಬೇಕು. ಸಮಸ್ಯೆ ಕಂಡು ಬರದಂತೆ ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಪೌರಕಾರ್ಮಿಕರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿಕೊಳ್ಳಲು ಸಂಬಂಧಿಸಿದ ಸಚಿವರೊಟ್ಟಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು. ಜತೆಗೆ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬ ಅಧಿಕಾರಿ ಕೇಂದ್ರ ಸ್ಥಾನದಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.
ಪೌರ ಆಯುಕ್ತೆ ರಾಧಿಕಾ, ಇಂಜಿನಿಯರ್ ಸುರೇಶ್, ಅಧಿಕಾರಿಗಳು, ಪೌರಕಾರ್ಮಿಕರು, ವಾಹನ ಚಾಲಕರು, ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net