ಗುಣಮಟ್ಟ ರಸ್ತೆಗಳಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ

ಮದ್ದೂರು ತಾಲೂಕಿನ ಬೂದಗುಪ್ಪೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಸಿ.ಚಲುವರಾಜು, ಉದಯ್, ಉಮೇಶ್, ಕಬ್ಬಾರೆ ರಾಘವೇಂದ್ರ, ಬೂದಗುಪ್ಪೆ ಚಲುವರಾಜು ಇದ್ದರು.
ಮದ್ದೂರು ತಾಲೂಕಿನ ಬೂದಗುಪ್ಪೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಸಿ.ಚಲುವರಾಜು, ಉದಯ್, ಉಮೇಶ್, ಕಬ್ಬಾರೆ ರಾಘವೇಂದ್ರ, ಬೂದಗುಪ್ಪೆ ಚಲುವರಾಜು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್
  • ಚುಂಚಗಹಳ್ಳಿ, ಆಲೂರುದೊಡ್ಡಿ, ಆಲೂರು ಹಾಗೂ ಬೂದಗುಪ್ಪೆ ಗ್ರಾಮ
ಮದ್ದೂರು: ರಸ್ತೆಗಳು ಅಭಿವೃದ್ಧಿಯ ಸಂಕೇತವಾಗಿರುವುದರಿಂದ ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಚುಂಚಗಹಳ್ಳಿ, ಆಲೂರುದೊಡ್ಡಿ, ಆಲೂರು ಹಾಗೂ ಬೂದಗುಪ್ಪೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ರಸ್ತೆಗಳು ಗುಣಮಟ್ಟದಿಂದ ಕೂಡಿದ್ದರೆ ಸಳೀಯ ಜನರು ಹಾಗೂ ವಾಹನ ಸವಾರರಿಗೆ ಹಲವು ರೀತಿಯಲ್ಲಿ ಅನುಕೂಲವಾಗುತ್ತದೆ. ಜತೆಗೆ ಆರ್ಥಿಕ ಪರಿಸ್ಥಿತಿಯೂ ಸುಧಾರಿಸುತ್ತದೆ ಎಂದರು.
ತಾಲೂಕಿನ ಪ್ರತಿ ಗ್ರಾಮದಲ್ಲೂ ರಸ್ತೆಗಳ ಅಭಿವೃದ್ಧಿಯಾಗಬೇಕು, ಮೂಲ ಸೌಕರ್ಯ ಕಲ್ಪಿಸಬೇಕು ಎಂಬ ಉದ್ದೇಶದಿಂದ ಪಟ್ಟಿಮಾಡಿಕೊಂಡು ಆದ್ಯತೆ ಮೇರೆಗೆ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ತಾಲೂಕಿನಲ್ಲಿ ರಸ್ತೆಗಳು, ಚರಂಡಿಗಳು, ನೀರಾವರಿ, ಶಿಕ್ಷಣ, ಕುಡಿಯುವ ನೀರು ಸೇರಿದಂತೆ ಪ್ರತಿ ಕ್ಷೇತ್ರಕ್ಕೂ ವಿಶೇಷ ಗಮನ ನೀಡಲಾಗಿದೆ. ಸರ್ಕಾರದಿಂದ 1800 ಕೋಟಿ ರೂ.ಗೂ ಅಧಿಕ ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವ ಮೂಲಕ ರಾಜ್ಯಕ್ಕೆ ಮಾದರಿ ತಾಲೂಕನ್ನಾಗಿ ಮಾಡುವುದೇ ನನ್ನ ಗುರಿ ಎಂದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದರ ಜತೆಗೆ ರಾಜ್ಯದಲ್ಲಿ ಸಮಗ್ರ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿರುವುದನ್ನು ರಾಜ್ಯ ಜನರು ಗಮನಿಸಿ ಸರ್ಕಾರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮುಂದೆಯೂ ಸರ್ಕಾರದಿಂದ ವಿಶೇಷ ಅನುದಾನ ತಂದು ತಾಲೂಕಿನಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಚಲುವರಾಜು, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಗ್ರಾಪಂ ಮಾಜಿ ಅಧ್ಯಕ್ಷರಾದ ಉದಯ್, ಸಂದೀಪ್, ಸದಸ್ಯರಾದ ಕಬ್ಬಾರೆ ರಾಘವೇಂದ್ರ, ಬೂದಗುಪ್ಪೆ ಚಲುವರಾಜು, ಮುಖಂಡರಾದ ಬಿ.ಎಚ್.ರೇವಣ್ಣ, ಉಮೇಶ್, ಬಿ.ಎಚ್.ರಾಮಕೃಷ್ಣ, ಬಿ.ಎಲ್.ಪುಟ್ಟಲಿಂಗಯ್ಯ, ಬಿ.ಪಿ.ಶಂಕರ್, ಬಿ.ಎಸ್.ಮಹದೇವಯ್ಯ, ಸುರೇಶ್, ಮಾದೇಶ್, ಬಿ.ಎಲ್.ಸತೀಶ್, ಜಯರಾಮು, ಸಿದ್ದೇಗೌಡ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net