ವಿದ್ಯಾರ್ಥಿಗಳ ಆರೋಗ್ಯ ಸುಧಾರಣೆ

ಮಳವಳ್ಳಿ ಪಟ್ಟಣದ ಸರ್ಕಾರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕಸ್ತೂರಬಾ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಯಿತು.
ಮಳವಳ್ಳಿ ಪಟ್ಟಣದ ಸರ್ಕಾರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕಸ್ತೂರಬಾ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಯಿತು.
Published on
ಮಳವಳ್ಳಿ: ತಾಲೂಕಿನ ಹಲಗೂರು ಸಮೀಪದ ದಳವಾಯಿಕೋಡಿಹಳ್ಳಿಯ ಕಸ್ತೂರಿಬಾ ವಸತಿ ಶಾಲೆಯಲ್ಲಿ ರಾತ್ರಿ ಊಟ ಮಾಡಿದ ಬಳಿಕ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಶುಕ್ರವಾರ ಡಿಸ್ಚಾರ್ಜ್ ಮಾಡಲಾಗಿದೆ.
ವಸತಿ ನಿಲಯದಲ್ಲಿ 111 ವಿದ್ಯಾರ್ಥಿನಿಯರಿದ್ದು, ಜೂ.17 ರಂದು ರಾತ್ರಿ ಊಟ ಸೇವಿಸಿ ಬಳಿಕ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ನಿಲಯದಲ್ಲಿದ್ದ ಆರೋಗ್ಯ ಸಹಾಯಕಿರುವ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು.
ಆದರೆ ಗುರುವಾರವೂ ಶಾಲೆಯ 31 ವಿದ್ಯಾರ್ಥಿಗಳಲ್ಲಿ ಆರೋಗ್ಯ ಸುಧಾರಣೆ ಕಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶುಕ್ರವಾರ ಮಧ್ಯಾಹ್ನ ಮಕ್ಕಳ ಆರೋಗ್ಯ ಸುಧಾರಣೆ ಕಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದ್ದಾರೆ. ಮಾಹಿತಿ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಶಿಕ್ಷಣ ಇಲಾಖೆ ಜಿಲ್ಲಾ ಯೋಜನ ಸಮನ್ವಯ ಅಧಿಕಾರಿ ಲಕ್ಷ್ಮೀ, ಬಿಇಇ ಉಮಾ, ತಾಲೂಕು ಪಂಚಾಯಿ ಕಾರ್ಯನಿರ್ವಹಕ ಅಧಿಕಾರಿ ಶ್ರೀನಿವಾಸ್, ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದರ ಜತೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net