ಕಾಲೇಜು ಜೀವನ ಪ್ರತಿ ವಿದ್ಯಾರ್ಥಿಯ ಬದುಕಿನಲ್ಲಿ ಮಹತ್ವದ ಘಟ್ಟವಾಗಿದ್ದು, ಇಲ್ಲಿಂದಲೇ ಭವಿಷ್ಯದ ಭದ್ರ ಬುನಾದಿ ನಿರ್ಮಾಣವಾಗುತ್ತದೆ. ಈ ಅವಧಿ ಪಠ್ಯಾಭ್ಯಾಸಕ್ಕೆ ಸೀಮಿತವಾಗಿರದೆ, ವ್ಯಕ್ತಿತ್ವ ವಿಕಸನ, ನಾಯಕತ್ವ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಅಮೂಲ್ಯ ಹಂತವಾಗಿದೆ. ನಿಮ್ಮ ಮುಂದಿರುವ ಪ್ರತಿಯೊಂದು ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಉನ್ನತ ಗುರಿಗಳನ್ನು ಸಾಧಿಸುವುದು ಸಾಧ್ಯ. ಇಂದಿನ ಪರಿಶ್ರಮವೇ ನಾಳಿನ ಯಶಸ್ಸಿಗೆ ಕಾರಣವಾಗುತ್ತದೆ. ಆದ್ದರಿಂದ ಶಿಕ್ಷಣದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಜೀವನ ಕೌಶಲಗಳಿಗೂ ಸಮಾನ ಆದ್ಯತೆ ನೀಡಬೇಕು ಎಂದು ಕಿವಿಮಾತು ಹೇಳಿದರು.