ತಾಲೂಕಿನ ಬೋರಾಪುರ, ಕದಲಗೆರೆ ಮತ್ತು ಅರಕನಕೆರೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊಳವೆ ಬಾವಿಗೆ ಅಳವಡಿಕೆ ಮಾಡಿದ್ದ ಸೋಲಾರ್ ಪಂಪ್‌ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಪ್ರಾಯೋಗಿಕವಾಗಿ ಈ ಗ್ರಾಮಗಳಲ್ಲಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಗ್ರಾಮಗಳಲ್ಲಿ ಈ ಕಾರ್ಯ ಮಾಡಲಾಗುವುದು. ವಿದ್ಯುತ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.