ಥಯಾಮಿನ್(ವಿಟಮಿನ್ ಬಿ-1) ಕೊರತೆಯು ಮಕ್ಕಳ ಹೃದಯ, ನರಮಂಡಲ ಹಾಗೂ ದೈಹಿಕ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈ ಕುರಿತು ವಿಶೇಷ ಮುನ್ನೆಚ್ಚರಿಕೆ ವಹಿಸಬೇಕು. ಥಯಾಮಿನ್ ಕೊರತೆಯಿಂದ ಶಿಶುಗಳಲ್ಲಿ ವಾಂತಿ, ಹಾಲು ಕುಡಿಯುವ ಪ್ರಮಾಣ ಕಡಿಮೆಯಾಗುವುದು, ಧ್ವನಿ ಕ್ಷೀಣಿಸುವುದು, ಕೆಮ್ಮು ಸೇರಿದಂತೆ ವಿವಿಧ ಲಕ್ಷಣಗಳು ಕಂಡುಬಂದಲ್ಲಿ ಆಶಾ ಕಾರ್ಯಕರ್ತೆಯರು ತಕ್ಷಣವೇ ಪಾಲಕರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.