ಸೋಮವಾರ ರಾತ್ರಿ ಗಣೇಶ್ ಮನೆ ಸಮೀಪದ ಅಂಗಡಿ ಬಳಿ ಕುಳಿತಿದ್ದಾಗ ಜಯಚಂದ್ರ ಜಗಳ ತೆಗೆದು ಹಲ್ಲೆ ಮಾಡಿದ್ದಾನೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಗಣೇಶ್‌ನನ್ನು ಆಸ್ಪತ್ರೆಗೆ ಕರೆದೊಯ್ದು ಚಿಕೆತ್ಸೆ ಕೊಡಿಸಿ ಮನೆಗೆ ಕರೆತಂದಿದ್ದಾರೆ. ಆದರೆ, ಗಣೇಶ್ ಮಂಗಳವಾರ ಮುಂಜಾನೆ 5 ಗಂಟೆಗೆ ಮೃತ ಪಟ್ಟಿದ್ದಾನೆ. ವಿಷಯ ತಿಳಿದ ಜಯಚಂದ್ರ ನಾಪತ್ತೆ ಆಗಿದ್ದಾನೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾದಿಕಾರಿ ಶೋಭಾರಾಣಿ, ಡಿವೈಎಸ್ಪಿ ಯಶ್ವಂತ್, ಸರ್ಕಲ್ ಇನ್‌ಸ್ಪೆಕ್ಟರ್ ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ತಂಡ ರಚಿಸಿದ್ದಾರೆ.