ಮಂಡ್ಯವನ್ನು ಕಸಮುಕ್ತಗೊಳಿಸಲು ಸಹಕರಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಮನವಿ

ಮಂಡ್ಯ ನಗರದ ಡಾ.ಶಿವಕುಮಾರ ಮಹಾಸ್ವಾಮೀಜಿ ಉದ್ಯಾನದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಗಿಡ ನೆಟ್ಟು ನೀರೆರೆದರು.
ಮಂಡ್ಯ ನಗರದ ಡಾ.ಶಿವಕುಮಾರ ಮಹಾಸ್ವಾಮೀಜಿ ಉದ್ಯಾನದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಗಿಡ ನೆಟ್ಟು ನೀರೆರೆದರು.
Published on

ಪ್ರಮುಖ ಮುಖ್ಯಾಂಶಗಳು

  • ಸ್ವಚ್ಛತಾ ಸರ್ವೇಕ್ಷಣಾ ಕಾರ್ಯಕ್ರಮ
  • ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲನೆ
ಮಂಡ್ಯ: ನಾಗರಿಕರು ಸ್ವಚ್ಚತೆಗೆ ಪ್ರಮುಖ ಆದ್ಯತೆ ನೀಡುವ ಮೂಲಕ ಕಸಮುಕ್ತ ಮಂಡ್ಯದ ಗುರಿ ಯಶಸ್ವಿಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದರು.
ನಗರದ ಸ್ವರ್ಣಸಂದ್ರದಲ್ಲಿರುವ ಪರಮಪೂಜ್ಯ ಡಾ.ಶಿವಕುಮಾರ ಮಹಾಸ್ವಾಮೀಜಿ ಉದ್ಯಾನದಲ್ಲಿ ನಗರಸಭೆಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಸರ್ವೇಕ್ಷಣಾ ಕಾರ್ಯಕ್ರಮ ಪರಿಶೀಲಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮ ಸ್ವಚ್ಛತೆ ಕಡೆಗೆ ಪ್ರಮುಖ ಹೆಜ್ಜೆಯಾಗಿದೆ. ಈಗಾಗಲೇ ಶಾಲಾ-ಕಾಲೇಜು ಆವರಣ ವಾರ್ಡ್‌ನ ಪ್ರಮುಖ ಸ್ಥಳಗಳಲ್ಲಿ ಸಮುದಾಯಿಕವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಕಂಡ ಕಂಡಲ್ಲಿ ಕಸ ಹಾಕುವುದನ್ನು ಹಲವರು ರೂಢಿ ಮಾಡಿಕೊಂಡಿದ್ದರು. ಅದನ್ನು ತಪ್ಪಿಸಿ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಸರ್ವೇಕ್ಷಣಾ ಕಾರ್ಯ ನಡೆಯುತ್ತಿದೆ ಎಂದರು.
ನಾಗರಿಕರು ಎಲ್ಲೆಂದರಲ್ಲಿ ಕಸ ಬಿಸಾಡಿ ಬಳಿಕ ನಗರಸಭೆಯವರು ಸ್ವಚ್ಛತಾ ಕಾರ್ಯ ಕೈಗೊಂಡಿಲ್ಲ ಎಂದು ದೂರುವುದನ್ನು ಕಂಡಿದ್ದೇವೆ. ಹಾಗಾಗಿ ಸ್ವಚ್ಛತಾ ಸರ್ವೇಕ್ಷಣಾ ಕಾರ್ಯ ಒಂದು ಪ್ರಮುಖ ಹೆಜ್ಜೆಯಾಗಿ ಕಂಡು ಬಂದಿದೆ. ಜನರು ಹಸಿ ಕಸ ಒಣ ಕಸವನ್ನು ಬೇರ್ಪಡಿಸಿ ಸ್ವಚ್ಛತಾ ಸಿಬ್ಬಂದಿಗೆ ನೀಡಿದಾಗ ಸೂಕ್ತ ರೀತಿಯಲ್ಲಿ ವಿಲೇವಾರಿ ಆಗಲು ಸಹಕಾರಿಯಾಗುತ್ತದೆ ಎಂದರು.
ಪೌರಾಯುಕ್ತೆ ಪಂಪಾಶ್ರೀ. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ಕಾಯಕಯೋಗಿ ಫೌಂಡೇಷನ್ ಅಧ್ಯಕ್ಷ ಎಂ.ಶಿವಕುಮಾರ್, ಎಂ.ಆರ್.ಮಂಜುನಾಥ್, ಪರಿಸರ ಅಧಿಕಾರಿ ಅಶ್ವಥ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net