ಅನಾದಿಕಾಲದಿಂದಲೂ ಜನರೊಂದಿಗೆ ಬೆಸೆದುಕೊಂಡಿರುವ ಯೋಗ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಅಭಿಮತ

ಮಂಡ್ಯ ನಗರದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಉದ್ಘಾಟಿಸಿದರು.
ಮಂಡ್ಯ ನಗರದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಭಾರತೀಯ ರೆಡ್‌ಕ್ರಾಸ್ ಭವನದಲ್ಲಿ ಯೋಗ ದಿನಾಚರಣೆ
  • ಮಾಂಡವ್ಯ ನಗರ ಅಲಯನ್ಸ್ ಸಂಸ್ಥೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ, ಕರ್ನಾಟಕ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಆಯೋಜನೆ
ಮಂಡ್ಯ: ಮಾನವ ನಾಗರಿಕತೆಯ ಉದಯದಷ್ಟೇ ಯೋಗ ಪ್ರಾಚೀನ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಅಭಿಪ್ರಾಯಪಟ್ಟರು.
ನಗರದಲ್ಲಿರುವ ಭಾರತೀಯ ರೆಡ್‌ಕ್ರಾಸ್ ಭವನದಲ್ಲಿ ಮಾಂಡವ್ಯ ನಗರ ಅಲಯನ್ಸ್ ಸಂಸ್ಥೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ, ಕರ್ನಾಟಕ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಯೋಗದ ಇತಿಹಾಸವು ಕೆಲವು ಶತಮಾನಗಳದ್ದಲ್ಲ. ಅನಾದಿಕಾಲದಿಂದಲೇ ಮಾನವ ಬದುಕಿನೊಂದಿಗೆ ಬೆಸೆದುಕೊಂಡು ಬಂದಿದೆ ಎಂದರು.
ನಾಗರಿಕತೆ ಹೆಚ್ಚಾದಂತೆಲ್ಲ ಬದಲಾವಣೆಯೊಂದಿಗೆ ಪರಿವರ್ತನೆಯ ಕಾಲಘಟ್ಟದಲ್ಲಿ ಯೋಗಾಭ್ಯಾಸ, ಆರೋಗ್ಯ ರಕ್ಷಣೆಯ ರಕ್ಷಕವಾಗಿದೆ. ಯೋಗಭ್ಯಾಸ ಮಾಡುವವರಿಗೆ ಅದರಿಂದ ಆಗುವ ಉತ್ತಮ ಕ್ರಿಯೆಗಳ ಅನುಭವವಾಗಿದೆ. ಪರಿಣಾಮಗಳ ಫಲವನ್ನು ಜನತೆಗೆ ಬಿತ್ತರಿಸಲಾಗುತ್ತಿದೆ ಎಂದರು.
ಮಾಂಡವ್ಯ ನಗರ ಅಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ.ಶಿವಕುಮಾರ್ ಮಾತನಾಡಿ, ಪ್ರಪಂಚವೇ ಯೋಗದಿನವನ್ನು ಆಚರಿಸುತ್ತಿದೆ. ಸಂಧ್ಯಾವಂದನೆಯಿಂದ ಯೋಗ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಧ್ಯಾನ ಮತ್ತು ಯೋಗದಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇತ್ತೀಚಿನ ದಿನಗಳಲ್ಲಿ ಮನುಷ್ಯರಿಗೆ ಯೋಗಾಭ್ಯಾಸ ಅತ್ಯಾವಶ್ಯಕ. ಮಾನಸಿಕ ಒತ್ತಡ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ಆರೋಗ್ಯ ರಕ್ಷಕವಾಗಿ ಯೋಗ ಕೆಲಸ ಮಾಡುತ್ತದೆ ಎಂದರು.
ಅಂತಾರಾಷ್ಟ್ರೀಯ ಅಲಯನ್ಸ್ ಸಂಸ್ಥೆಯ ಸೌತ್ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು, 1ನೇ ಉಪ ಜಿಲ್ಲಾ ಪ್ರಾಂತಪಾಲ ಚಂದ್ರಶೇಖರ್, ಅಲಯನ್ ಸಂಸ್ಥೆಯ ಪದಾಧಿಕಾರಿ ಜಗದೀಶ್, ರೆಡ್‌ಕ್ರಾಸ್ ಜಂಟಿ ಕಾರ್ಯದರ್ಶಿ ರಂಗಸ್ವಾಮಿ, ಯೋಗ ಆಚಾರ್ಯ ಶೋಭಾ, ಪ್ರಮೀಳಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net