ನಾನೆಂದೂ ಜಾಹೀರಾತು ಹಾಕಿಸಿಕೊಂಡು ಪ್ರಚಾರದ ಗೀಳಿಗೆ ಹೋಗಲಿಲ್ಲ

ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಎ.ನಾಗತಿಹಳ್ಳಿ ಗ್ರಾಮದಲ್ಲಿ ಸಿಎಸ್‌ಆರ್ ಅನುದಾನದಡಿಯಲ್ಲಿ ಸರ್ಕಾರಿ ಶಾಲೆಯ ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ಮಾಜಿ ಶಾಸಕ ಸುರೇಶ್‌ಗೌಡ, ಗೌರೀಶ್, ನೆಲ್ಲಿಗೆರೆ ಬಾಲು ಇದ್ದರು.

Published on

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ

ನಾಗಮಂಗಲ: ಜನರು ಕೊಟ್ಟ ಅಧಿಕಾರವನ್ನು ನಾನು ಪ್ರಾಮಾಣಿಕವಾಗಿ ಅಭಿವೃದ್ಧಿಗಾಗಿ ಬಳಸಿಕೊಳ್ಳುತ್ತಿದ್ದು, ನಾನು ಮಾಡಿರುವ ಜನಪರ ಕೆಲಸಗಳಿಗೆ, ಯೋಜನೆಗಳಿಗೆ ಭೂಮಿಪೂಜೆ ಮಾಡಿ ನಾಮಫಲಕಗಳ ಮೇಲೆ ಹೆಸರು ಹಾಕಿಸಿಕೊಳ್ಳುವುದು ಅಥವಾ ಮಾಧ್ಯಮಗಳಲ್ಲಿ ಜಾಹೀರಾತು ಹಾಕಿಸಿಕೊಂಡು ಪ್ರಚಾರ ಪಡೆಯುವವನಲ್ಲ. ನಾನು ಮಾಡುವ ಪ್ರಾಮಾಣಿಕ ಕೆಲಸ ಜನರಿಗೆ ಹಾಗೂ ದೇವರಿಗೆ ತಿಳಿದಿರುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಎ.ನಾಗತಿಹಳ್ಳಿ ಗ್ರಾಮದಲ್ಲಿ ಸಿಎಸ್‌ಆರ್ ಅನುದಾನದಡಿಯಲ್ಲಿ ಸರ್ಕಾರಿ ಶಾಲೆಯ ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ನಾನು ಮಾಡುವ ಕೆಲಸಕ್ಕೆ ಶಂಕುಸ್ಥಾಪನೆ ಮಾಡುವ ಪರಿಪಾಠ ಇಟ್ಟುಕೊಂಡವನಲ್ಲ. ಆದರೆ ಇತ್ತೀಚೆಗೆ ಶಂಕುಸ್ಥಾಪನೆಗೆ ಬರಲೇಬೇಕು ಎಂದು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಚನ್ನಪಟ್ಟಣದಲ್ಲಿ ನಾನು ಸಾವಿರಾರು ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಒಂದು ದಿನವೂ ನಾನು ಕ್ಷೇತ್ರಕ್ಕೆ ಹೋಗಿ ಅಡಿಗಲ್ಲು ಹಾಕಿ ಹೆಸರು ಕೆತ್ತಿಸಿಕೊಳ್ಳುವ ಕೆಲಸ ಮಾಡಲಿಲ್ಲ ಎಂದರು.
ರಾಜ್ಯದಲ್ಲಿ ಕೇಂದ್ರ ಅನುದಾನಿತ ಅನೇಕ ಯೋಜನೆಗಳು ನನೆಗುದಿಗೆ ಬಿದ್ದಿವೆ. ಕೇಂದ್ರದ ಅನುದಾನ ಇಲ್ಲಿ ಬಳಕೆ ಆಗದೆ ವಾಪಸ್ ಬಂದಿದೆ. ಮ್ಯಾಚಿಂಗ್ ಗ್ರಾೃಂಟ್ ಮತ್ತು ಸಕಾಲಕ್ಕೆ ಭೂಮಿ ಒದಗಿಸುವುದು ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಈ ಸಮಸ್ಯೆಯನ್ನು ಸರ್ಕಾರ ಬಗೆಹರಿಸಬೇಕು. ಯೋಜನೆಗಳಿಗೆ ಹಣದ ಕೊರತೆ ಇದೆ. ನಮ್ಮ ಕಡೆಯಿಂದ ಎಲ್ಲ ಸಹಕಾರ ಕೊಡುವುದಕ್ಕೆ ಸಿದ್ಧರಿದ್ದೇವೆ. ಕೇವಲ ಜಾಹೀರಾತುಗಳ ಮೂಲಕ ಅಭಿವೃದ್ಧಿ ಸಾಧ್ಯವಿಲ್ಲ. ಅಂತಹ ಪ್ರವೃತ್ತಿ ನನ್ನದಲ್ಲ ಎಂದರು.
ಸಿಎಸ್‌ಆರ್ ಅನುದಾನದಡಿಯಲ್ಲಿ ತಾಲೂಕಿನ ಕರಡಹಳ್ಳಿ ಸರ್ಕಾರಿ ಶಾಲೆಯ ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ಸಿಎಸ್‌ಆರ್ ಅನುದಾನದಡಿಯಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಶಾಲೆಯ ನೂತನ ಕಟ್ಟಡಗಳ ಕಾಮಗಾರಿಯನ್ನು ಪರಿಶೀಲಿಸಿದರು.
ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕ ಸುರೇಶ್‌ಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ನೆಲ್ಲಿಗೆರೆ ಬಾಲು, ಮುಖಂಡರಾದ ಗೌರೀಶ್, ಜಿಪಂ ಮಾಜಿ ಸದಸ್ಯ ಶಿವಪ್ರಕಾಶ್ ಸೇರಿದಂತೆ ಮತ್ತಿತರರಿದ್ದರು.
ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಎ.ನಾಗತಿಹಳ್ಳಿ ಗ್ರಾಮದಲ್ಲಿ ಸಿಎಸ್‌ಆರ್ ಅನುದಾನದಡಿಯಲ್ಲಿ ಸರ್ಕಾರಿ ಶಾಲೆಯ ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ಮಾಜಿ ಶಾಸಕ ಸುರೇಶ್‌ಗೌಡ, ಗೌರೀಶ್, ನೆಲ್ಲಿಗೆರೆ ಬಾಲು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net