ಗುರುವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಪಟ್ಟಣದ ಡಾ.ರಾಜಕುಮಾರ್ ವೃತ್ತ(ಮಂಡ್ಯ ಸರ್ಕಲ್) ನಿಂದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರನ್ನು ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಗುವುದು. ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಮಟ್ಟದ ನಾಯಕರು, ಜಿಲ್ಲಾ ಮಟ್ಟದ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಎಂಎಲ್‌ಸಿಗಳು ಹಾಗೂ ಪಕ್ಷದ ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದಾರೆ.