ಅನೇಕ ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ಸಾರ್ವಜನಿಕರು ಅಧಿಕಾರಿಗಳನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಇಂತಹ ಜನಸ್ಪಂದನ ಕಾರ್ಯಕ್ರಮದಲ್ಲಿ ಅಧಿಕಾರಿಗಳು ನಿಮ್ಮ ಊರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಆಲಿಸಿ ಕಾನೂನು ಬದ್ಧವಾಗಿ ಪರಿಹಾರ ಒದಗಿಸುತ್ತಾರೆ. ಮೃತರಾದವರ ಹೆಸರು ಪಹಣಿಯಲ್ಲಿ ಈಗಲೂ ಸಹ ಮುಂದುವರಿಯುತ್ತಿದೆ. ವಾರಸುದಾರರು ತಾಲೂಕು ಕಚೇರಿಗೆ ಆರ್.ಟಿ.ಸಿ, ವಂಶವೃಕ್ಷ ಮತ್ತು ಮರಣ ಪ್ರಮಾಣ ಪತ್ರ ನೀಡಿ ತಮ್ಮ ಹೆಸರಿಗೆ ಮಾಡಿಕೊಳ್ಳಬೇಕಾಗಿತ್ತು. ಜನರು ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಒಂದು ಮಹತ್ವಾಕಾಂಕ್ಷಿ ಯೋಜನೆಯಾದ ಪೌತಿ ಖಾತಾ ಆಂದೋಲನವನ್ನು ಜಾರಿಗೊಳಿಸಿದೆ. ಮಂಡ್ಯ ಜಿಲ್ಲೆಯ ಕಂದಾಯ ಇಲಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿ ವರ್ಗ ಉತ್ತಮವಾದ ಕೆಲಸವನ್ನು ಮಾಡಿರುವುದರಿಂದ ರಾಜ್ಯದಲ್ಲಿ ಪೌತಿ ಖಾತೆ ಆಂದೋಲನದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಆಫ್‌ಲೈನ್‌ನಲ್ಲಿ 70 ಸಾವಿರಕ್ಕೂ ಹೆಚ್ಚು ಪೌತಿ ಖಾತೆ ಮತ್ತು ಆನ್‌ಲೈನ್‌ನಲ್ಲಿ 58 ಸಾವಿರ ಪೌತಿ ಖಾತೆಯನ್ನು ಜಿಲ್ಲೆಯಲ್ಲಿ ಮಾಡಿದ್ದೇವೆ. ಮುಂದಿನ ದಿನಗಳಲ್ಲೂ ಹೆಚ್ಚು ಪೌತಿ ಖಾತೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.