ಜೆಡಿಎಸ್ ಬೆಳ್ಳಿ ಹಬ್ಬ ಮೇ 7ರಂದು

ಪಾಂಡವಪುರದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ ನಿಮಿತ್ತ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಉದ್ಘಾಟಿಸಿದರು. ಎಸ್.ಎ.ಮಲ್ಲೇಶ್, ಸಿ.ಅಶೋಕ್, ಎಚ್.ಮಂಜುನಾಥ್, ಯೋಗೇಶ್, ಪುಟ್ಟಸ್ವಾಮಿಗೌಡ, ನಂಜೇಗೌಡ, ದ್ಯಾವಪ್ಪ ಇತರರಿದ್ದರು.
ಪಾಂಡವಪುರದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ ನಿಮಿತ್ತ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಉದ್ಘಾಟಿಸಿದರು. ಎಸ್.ಎ.ಮಲ್ಲೇಶ್, ಸಿ.ಅಶೋಕ್, ಎಚ್.ಮಂಜುನಾಥ್, ಯೋಗೇಶ್, ಪುಟ್ಟಸ್ವಾಮಿಗೌಡ, ನಂಜೇಗೌಡ, ದ್ಯಾವಪ್ಪ ಇತರರಿದ್ದರು.
Published on
* ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾಹಿತಿ
ಪಾಂಡವಪುರ : ಜೆಡಿಎಸ್ ಪಕ್ಷ ಸ್ಥಾಪನೆಗೊಂಡು 25ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿಹಬ್ಬ ಹಾಗೂ ಜನರೊಂದಿಗೆ ಜನತಾದಳ ಕಾರ್ಯಕ್ರಮವನ್ನು ಮೇ 7ರಂದು ಪಟ್ಟಣದ ಪಾಂಡವ ಕ್ರೀಡಾಂಗಣದ ಸಮೀಪ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮನವಿ ಮಾಡಿದರು.
ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಲ್ಲೂ ಜನರೊಂದಿಗೆ ಜನತಾದಳ ಕಾರ್ಯಕ್ರಮ ಆಯೋಜನೆಗೊಂಡು ಪಕ್ಷದ ಸದಸ್ಯತ್ವ ನೋಂದಣಿ ಮತ್ತು ಪಕ್ಷ ಸಂಘಟನೆ ಕಾರ್ಯ ಮಾಡಲಾಗಿದೆ. ನಮ್ಮ ಕ್ಷೇತ್ರದಲ್ಲೂ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಆದರೆ, ಕೆಲ ಕಾರಣಾಂತರಗಳಿಂದ ಕಾರ್ಯಕ್ರಮ ನಡೆದಿರಲಿಲ್ಲ. ಇದೀಗ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಳಗ್ಗೆ 10 ಗಂಟೆಗೆ ಪಟ್ಟಣದ ಡಾ.ರಾಜಕುಮಾರ್ ವೃತ್ತದಿಂದ ತೆರೆದ ವಾಹನದ ಮೂಲಕ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ವೇದಿಕೆಗೆ ಕರೆತರಲಾಗುವುದು, ಕಾರ್ಯಕ್ರಮದ ಯಶಸ್ಸಿಗಾಗಿ ಕ್ಷೇತ್ರದ ಏಳು ಜಿಪಂ ಕ್ಷೇತ್ರಗಳಿಂದಲೂ ಕಾರ್ಯಕರ್ತರನ್ನು ಕರೆತರಲು ವಾಹನ ವ್ಯವಸ್ಥೆ ಮಾಡಲಾಗುವುದು. ಪ್ರತಿ ಜಿಪಂ ಕ್ಷೇತ್ರಕ್ಕೆ 10 ಜನರ ತಂಡ ನೇಮಕ ಮಾಡಿ ಜನರನ್ನು ಕರೆತರುವ ಜವಾಬ್ದಾರಿ ನೀಡಲಾಗಿದೆ ಎಂದರು.
ತಾಯಿ ಹೃದಯಿ ಎಚ್‌ಡಿಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಯಿ ಹೃದಯಿ. ಬಡವರು, ಮಹಿಳೆಯರು, ರೈತರು ಹಾಗೂ ಅಂಗವಿಕಲರ ಮೇಲೆ ವಿಶೇಷ ಅಭಿಮಾನ ಇಟ್ಟುಕೊಂಡಿದ್ದಾರೆ. ಅವರ ಮಗ ನಿಖಿಲ್ ಕುಮಾರಸ್ವಾಮಿ ಸಹೃದಯಿ ವ್ಯಕ್ತಿತ್ವ ರೂಢಿಸಿಕೊಂಡಿದ್ದಾರೆ. ರಾಜ್ಯದ ನಾಯಕರಾದ ಸುರೇಶ್ ಬಾಬು, ಕೃಷ್ಣಾರೆಡ್ಡಿ ಸೇರಿದಂತೆ ಜಿಲ್ಲೆಯ ಎಲ್ಲ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ. ನಮ್ಮ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಸಭೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ಎ.ಮಲ್ಲೇಶ್, ಜಿಪಂ ಮಾಜಿ ಸದಸ್ಯರಾದ ಸಿ.ಅಶೋಕ್, ಎಚ್.ಮಂಜುನಾಥ್, ಯೋಗೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪುಟ್ಟಸ್ವಾಮಿಗೌಡ, ನಂಜೇಗೌಡ, ದ್ಯಾವಪ್ಪ, ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಸ್.ಆನಂದ್, ಸಿ.ಎಸ್.ಗೋಪಾಲೇಗೌಡ, ಆರ್.ಸೋಮಶೇಖರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net