ಬಿದರಹೊಸಹಳ್ಳಿಯಲ್ಲಿ ಜಾಬ್ ಕಾರ್ಡ್ ಮೇಳ

 ಜಾಬ್ ಕಾರ್ಡ್ ಮೇಳ
ಜಾಬ್ ಕಾರ್ಡ್ ಮೇಳ
Published on

ಕೆ.ಎ.ದೊಡ್ಡಿ:

ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯಡಿಯಲ್ಲಿ ಐಇಸಿ ಚಟುವಟಿಕೆ ಮೂಲಕ ಜಿಲ್ಲೆಯ ಮದ್ದೂರು ತಾಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿದರಹೊಸಹಳ್ಳಿ ಗ್ರಾಮದಲ್ಲಿ ಜಾಬ್ ಕಾರ್ಡ್ ಮೇಳ ಅಭಿಯಾನವನ್ನು ಕೈಗೊಳ್ಳಲಾಯಿತು.

ಸ್ಥಳೀಯವಾಗಿಯೇ ಉದ್ಯೋಗ ಒದಗಿಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ಆ.15ರಿಂದ ಸೆ. 15ರವರೆಗೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ಜಾಬ್ ಕಾರ್ಡ್ ಮೇಳ ಅಭಿಯಾನ ಆಯೋಜನೆ ಮಾಡಲಾಗಿದೆ. ಜಾಬ್ ಕಾರ್ಡ್ ಮೇಳದ ಕುರಿತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಡಂಗೂರ ಸಾರುವುದು, ಸ್ವಚ್ಛತಾ ವಾಹನಗಳಲ್ಲಿ ಮೂಲಕ ಜಾಗೃತಿ ಸಂದೇಶಗಳನ್ನು ಸಾರುತ್ತಾ ವ್ಯಾಪಕ ಪ್ರಚಾರ ಮಾಡಲು ಆದೇಶ ಮಾಡಲಾಗಿದೆ.
ಜಾಬ್ ಕಾರ್ಡ್ ಇಲ್ಲದ ಕುಟುಂಬಗಳು ಗ್ರಾಮ ಪಂಚಾಯಿತಿಗಳಲ್ಲಿ ನಮೂನೆ-1 ಪಡೆದು ಭರ್ತಿ ಮಾಡಿ, ಕಡ್ಡಾಯ ದಾಖಲೆಗಳಾಗಿ ಇ-ಕೆವೈಸಿ ಆದ ಬ್ಯಾಂಕ್ ಪುಸ್ತಕ, ಆಧಾರ್, ರೇಷನ್ ಕಾರ್ಡ್ ನಕಲು ಪ್ರತಿ ಹಾಗೂ ಎರಡು ಭಾವಚಿತ್ರ ನೀಡಿ ಹೊಸ ಗ್ರಾಮೀಣ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಪಡೆಯಬಹುದು.
ಜಾಬ್ ಕಾರ್ಡ್ ಮೇಳ ಅಭಿಯಾನದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಅರ್ಚನಾ, ಐಇಸಿ ಸಂಯೋಜಕಿ ಮಂಜುಳಾ, ನಿಶ್ಚಿತಾ ಹಾಗೂ ಕೂಲಿಕಾರರು ಹಾಜರಿದ್ದರು.
ಬಿದರಹೊಸಹಳ್ಳಿ ಗ್ರಾಮದಲ್ಲಿ ಜಾಬ್ ಕಾರ್ಡ್ ಮೇಳ ಅಭಿಯಾನ ನಡೆಯಿತು. ಅರ್ಚನಾ, ಮಂಜುಳಾ ನಿಶ್ಚಿತಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net