ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೊ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹಾಗೂ ವಿಶೇಷವಾಗಿ ಅಂಗವಿಕಲರಿಗೂ ಸಹ ಉದ್ಯೋಗಗಳು ಲಭ್ಯವಿದೆ. ಉತ್ಪಾದನಾ ವಲಯ, ಬ್ಯಾಂಕಿಂಗ್, ಮಾರಾಟ, ಮಾಹಿತಿ ತಂತ್ರಜ್ಞಾನ, ಕೈಗಾರಿಕೆ, ಗಾಮೆರ್ಂಟ್ಸ್, ಸೇವಾ ವಲಯ, ಪ್ರವಾಸೋದ್ಯಮ, ಹಣಕಾಸು ಹಾಗೂ ನಿರ್ವಹಣಾ ಕ್ಷೇತ್ರ ಸೇರಿದಂತೆ ಹತ್ತು ಹಲವು ವಿಭಾಗಗಳಲ್ಲಿ ಅಭ್ಯರ್ಥಿಗಳು ತಮ್ಮ ಕೌಶಲಕ್ಕೆ ತಕ್ಕಂತೆ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ವಿತರಿಸಲಾಗುವುದು ಎಂದು ತಿಳಿಸಿದರು.