ಕೆ.ಆರ್.ಪೇಟೆ: ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ದುಡಿಮೆಗೆ ತಳ್ಳುವುದು ದೇಶದ ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ನ್ಯಾಯಮೂರ್ತಿ ಸುಧೀರ್ ಹೇಳಿದರು.
ಪಟ್ಟಣದ ಗ್ರಾಮ ಭಾರತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಕಾರ್ಮಿಕ ಇಲಾಖೆ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಚರಣೆ ಹಾಗೂ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾನೂನು ನೆರವು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಆರೋಗ್ಯ ಮತ್ತು ಸಂರಕ್ಷಿತ ಬಾಲ್ಯ ದೊರೆಯಬೇಕು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಸಾರ್ವಜನಿಕರು ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಮಕ್ಕಳ ಬಾಲ್ಯದ ರಕ್ಷಣೆಗೆ ಕೈಜೋಡಿಸಬೇಕೆಂದು ಹೇಳಿದರು.
ನ್ಯಾಯಾಧೀಶೆ ಡಾ, ಚಾಂದಿನಿ ಮಾತನಾಡಿದರು.
ಕಾರ್ಮಿಕ ನಿರೀಕ್ಷಕ ಎಮ್ ಸ್ವಾಮಿ, ಸಹಾಯಕ ಸರ್ಕಾರಿ ಅಭಿಯೋಜಕರು ಡಾ ಲೋಕಪ್ರಕಾಶ್, ನಾರಾಯಣ, ಮುಖ್ಯ ಶಿಕ್ಷಕ ಪುರುಷೋತ್ತಮ್ ವಕೀಲರಾದ ಪ್ರಸನ್ನ ಕುಮಾರ್, ಎಸ್.ಆರ್. ನವೀನ್ ಇತರರಿದ್ದರು.