ಈ ವಿಶೇಷ ಕಾರ್ಯಕ್ರಮದಲ್ಲಿ ಗಮನಸೆಳೆದಿದ್ದು ಕರ್ನಾಟಕದ ಪ್ರತಿನಿಧಿಯಾಗಿ ಪಾಲ್ಗೊಂಡ ಶಾಸಕ ಪಿ.ರವಿಕುಮಾರ್ ಗಣಿಗ ಅವರ ಕನ್ನಡ ಭಾಷಣ. ಆಂಗ್ಲ ಭಾಷೆಯಲ್ಲಿ ಮಾತು ಆರಂಭಿಸಿದ ಶಾಸಕ, ನನ್ನ ಮಾತೃಭಾಷೆಯಲ್ಲಿ ಮಾತನಾಡುವುದಾಗಿ ಹೇಳಿ ಎಲ್ಲರಿಗೂ ನಮಸ್ಕಾರ ತಿಳಿಸಿದರು. ಈ ವೇಳೆ ನೆರೆದಿದ್ದವರು ಚಪ್ಪಾಳೆ ತಟ್ಟುವ ಮೂಲಕ ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಂಗ್ಲೆಂಡ್‌ನ ಪಾರ್ಲಿಮೆಂಟ್‌ನಲ್ಲಿ ಕನ್ನಡ ಪ್ರತಿನಿಧಿಯಾಗಿ ಪಾಲ್ಗೊಂಡಿರುವುದು ನನಗೆ ಖುಷಿಯ ವಿಚಾರ. ಭಾರತ ಮೂಲದ ಉದ್ಯಮಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು.