ಜನ ಕಲ್ಯಾಣದ ಕನಸು ಕಂಡಿದ್ದ ಕೆಂಪೇಗೌಡ

 ಕೆ.ಆರ್.ಪೇಟೆ ತಾಲೂಕು ಒಕ್ಕಲಿಗರ ವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವವನ್ನು ಪಟ್ಟಣದ ಟಿಎಪಿಸಿಎಂಎಸ್ ಲಿಂಗಪ್ಪ ಸಮುದಾಯ ಭವನದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.  ಶ್ರೀನಿರ್ಮಲಾನಂದನಾಥ ಸ್ವಾಮೀಜಿ,  ಶ್ರೀನಿಶ್ಚಲಾನಂದನಾಥ ಸ್ವಾಮೀಜಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಇತರರು ಇದ್ದರು.
ಕೆ.ಆರ್.ಪೇಟೆ ತಾಲೂಕು ಒಕ್ಕಲಿಗರ ವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವವನ್ನು ಪಟ್ಟಣದ ಟಿಎಪಿಸಿಎಂಎಸ್ ಲಿಂಗಪ್ಪ ಸಮುದಾಯ ಭವನದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಶ್ರೀನಿಶ್ಚಲಾನಂದನಾಥ ಸ್ವಾಮೀಜಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • Kempegowda
ಕೆ.ಆರ್.ಪೇಟೆ: ನಾಡಪ್ರಭು ಕೆಂಪೇಗೌಡರು ವಿಶ್ವಮಾನ್ಯ ನಾಯಕ. ನೂರಾರು ಕೆರೆ-ಕಟ್ಟೆಗಳನ್ನು ಕಟ್ಟಿಸಿ, ಸುಸಜ್ಜಿತ ಮಾರುಕಟ್ಟೆಗಳನ್ನು ನಿರ್ಮಿಸಿ, ಜನಕಲ್ಯಾಣ ರಾಜ್ಯದ ಕನಸು ಕಂಡ ಮಹಾನ್ ದಾರ್ಶನಿಕ. ಇಂದಿನ ಆಡಳಿತಗಾರರು ಅವರ ದೂರದೃಷ್ಟಿ, ಆಡಳಿತ ವೈಖರಿ, ಜನಪರ ಕಾಳಜಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ತಾಲೂಕು ಒಕ್ಕಲಿಗರ ವೇದಿಕೆ ವತಿಯಿಂದ ಪಟ್ಟಣದ ಟಿಎಪಿಸಿಎಂಎಸ್ ಲಿಂಗಪ್ಪ ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಎಲ್ಲವೂ ಸಾಧ್ಯ. ತಾಲೂಕಿನಲ್ಲಿ ಸಮುದಾಯ ಭವನದ ನಿರ್ಮಾಣ ಬೇಡಿಕೆ ನ್ಯಾಯಯುತವಾಗಿದ್ದು, ಈ ನಿಟ್ಟಿನಲ್ಲಿ ಒಂದಾಗಿ ಕೆಲಸ ಮಾಡಿ ಎಂದು ಕರೆ ನೀಡಿದರು.
ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿ ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ಕೆಂಪೇಗೌಡರು ಸರ್ವ ಜನಾಂಗದ ಶ್ರೇಯೋಭಿವೃದ್ಧಿಗೆ ದುಡಿದ ಧೀಮಂತ ನಾಯಕ. ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನಕ್ಕಾಗಿ ಮನವಿ ಬಂದಿದೆ. ಎಲ್ಲ ಭಿನ್ನಾಭಿಪ್ರಾಯ ಬದಿಗೊತ್ತಿ ಸಮುದಾಯದ ಮುಖಂಡರು, ಯುವಕರು ಒಂದಾಗಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು. ಮಠದಿಂದ ಸಂಪೂರ್ಣ ಸಹಕಾರ ಇರುತ್ತದೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ಕೆ.ಆರ್.ಪೇಟೆ ಕ್ಷೇತ್ರದ ಮೇಲೆ ನನಗೆ ವಿಶೇಷ ಪ್ರೀತಿ, ಅಭಿಮಾನ ಇದೆ. ಸಮುದಾಯ ಭವನದ ಬೇಡಿಕೆ ಬಹುದಿನಗಳದ್ದು. ಶಾಸಕರು ಈ ಬಗ್ಗೆ ಗಮನ ಹರಿಸಿ ನಿವೇಶನ ಕೊಡಿಸಬೇಕು. ಶ್ರೀಗಳ ಆಶೀರ್ವಾದ, ನಿಮ್ಮೆಲ್ಲರ ಸಹಕಾರದಿಂದ ಕ್ಷೇತ್ರವನ್ನು ಮಾದರಿ ತಾಲೂಕನ್ನಾಗಿ ಮಾಡೋಣ ಎಂದರು.
ಮಾಜಿ ಸಚಿವ ಕೆ.ಸಿ. ನಾರಾಯಣಗೌಡ ಮಾತನಾಡಿ, ನನ್ನ ಅವಧಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಪ್ರಯತ್ನ ಮಾಡಿದ್ದೆ. ಈಗಿನ ಶಾಸಕರು ಈ ಕೆಲಸ ಪೂರ್ಣಗೊಳಿಸಲಿ ಎಂದು ಹೇಳಿದರು.
ಒಕ್ಕಲಿಗರ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಎಚ್.ಟಿ. ಮಂಜು, ನಿವೇಶನದ ಸಮಸ್ಯೆ, ಅನುದಾನದ ಕೊರತೆ ಸೇರಿದಂತೆ ಹಲವು ಅಡಚಣೆಗಳಿವೆ. ಇದೆಲ್ಲವನ್ನೂ ನಿವಾರಿಸಿ ನಿವೇಶನ ಗುರುತಿಸಿ, ಸರ್ಕಾರದಿಂದ ಅನುದಾನ ಕೊಡಿಸಲು ನನ್ನ ಸಂಪೂರ್ಣ ಸಹಕಾರ ಮತ್ತು ಪ್ರಾಮಾಣಿಕ ಪ್ರಯತ್ನ ಇರುತ್ತದೆ ಎಂದು ಭರವಸೆ ನೀಡಿದರು.
ಕೆಂಪೇಗೌಡರ ಪ್ರತಿಮೆಯನ್ನು ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ನಾದಸ್ವರ, ವೀರಗಾಸೆ, ಡೊಳ್ಳು ಕುಣಿತ, 20ಕ್ಕೂ ಹೆಚ್ಚು ಹಳ್ಳಿಕಾರ್ ಜೋಡೆತ್ತುಗಳ ಎತ್ತಿನ ಗಾಡಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
ಶ್ರೀ ಪುರುಷೋತ್ತಮ ಸ್ವಾಮೀಜಿ, ಮಂಡ್ಯ ಒಕ್ಕಲಿಗ ಸಂಘದ ನಿರ್ದೇಶಕ ಅಶೋಕ್ ಜಯರಾಮ್, ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್, ಮನ್ಮುಲ್ ನಿರ್ದೇಶಕ ಡಾಲು ರವಿ, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ, ಕೈ ಮಗ್ಗ ನಿಗಮ ಮಂಡಳಿ ಅಧ್ಯಕ್ಷ ಐಪನಹಳ್ಳಿ ನಾಗೇಂದ್ರ ಕುಮಾರ್, ಪುರಸಭೆ ಅಧ್ಯಕ್ಷೆ ಪಂಕಜಾ ಪ್ರಕಾಶ್, ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಎ.ಬಿ. ಕುಮಾರ್, ರಾಮಕೃಷ್ಣಗೌಡ, ಒಕ್ಕಲಿಗ ಸಂಘದ ಜಿಲ್ಲಾ ಅಧ್ಯಕ್ಷ ತಿಮ್ಮೇಗೌಡ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net