ನಗರದ ಟೌನ್ ಕ್ಲಬ್‌ನಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮದ ಸಾನ್ನಿಧ್ಯವನ್ನು ಕೆಂಗೇರಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ. ಶಾಸಕ ಕೆ.ಎಂ.ಉದಯ್ ಉದ್ಘಾಟಿಸಲಿದ್ದಾರೆ. ಶ್ರೀ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಜಿ.ಟಿ.ಶಿವಶಂಕರೇಗೌಡ ವಿತರಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ದಿನೇಶ್‌ಗೂಳಿಗೂಡ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಪ್ರಾಧ್ಯಾಪಕ ಪ್ರೊ.ಎಚ್.ಪಿ.ನಾಗರಾಜು, ಜಿಪಂ ಮಾಜಿ ಅಧ್ಯಕ್ಷ ಬಿ.ವಿವೇಕಾನಂದ, ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಮೂಡ್ಯ ಚಂದ್ರು, ನೆಲ್ಲಿಗೆರೆ ಬಾಲು ಹಾಗೂ ಎಪಿಎಂಸಿ ಮಾಜಿ ಉಪಾಧ್ಯಕ್ಷೆ ಮಮತಾ ಶಂಕರೇಗೌಡ ಆಗಮಿಸಲಿದ್ದಾರೆಂದು ತಿಳಿಸಿದರು.