ಶಿಕ್ಷಣದೊಂದಿಗೆ ಸಂಸ್ಕಾರವನ್ನೂ ನೀಡಬೇಕು

ಕಿಕ್ಕೇರಿ ಹೋಬಳಿ ಆನೆಗೊಳ ಗ್ರಾಮದ ಆದಿಚುಂಚನಗಿರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸಂಸ್ಥೆ ಕಾರ್ಯದರ್ಶಿ ಜೆ.ಎನ್. ರಾಮಕೃಷ್ಣೇಗೌಡ ಉದ್ಘಾಟಿಸಿದರು. ಮಲ್ಲಿಕಾರ್ಜುನ, ಬಿ.ಎಸ್. ಮಂಜುನಾಥ್, ಎ.ಆರ್. ಮಂಜುನಾಥ್ ಉಪಸ್ಥಿತರಿದ್ದರು.
ಕಿಕ್ಕೇರಿ ಹೋಬಳಿ ಆನೆಗೊಳ ಗ್ರಾಮದ ಆದಿಚುಂಚನಗಿರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸಂಸ್ಥೆ ಕಾರ್ಯದರ್ಶಿ ಜೆ.ಎನ್. ರಾಮಕೃಷ್ಣೇಗೌಡ ಉದ್ಘಾಟಿಸಿದರು. ಮಲ್ಲಿಕಾರ್ಜುನ, ಬಿ.ಎಸ್. ಮಂಜುನಾಥ್, ಎ.ಆರ್. ಮಂಜುನಾಥ್ ಉಪಸ್ಥಿತರಿದ್ದರು.
Published on
ಕಿಕ್ಕೇರಿ : ಶಿಕ್ಷಣದೊಂದಿಗೆ ಸಂಸ್ಕಾರವನ್ನೂ ಮಕ್ಕಳಿಗೆ ನೀಡಬೇಕು ಎಂದು ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ತಿಳಿಸಿದರು.
ಹೋಬಳಿಯ ಆನೆಗೊಳ ಗ್ರಾಮದ ಆದಿಚುಂಚನಗಿರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಭೈರವೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ 13ನೇ ಪುಣ್ಯ ಸಂಸ್ಮರಣೆ, ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. 500ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಯನ್ನು ತೆರೆದು ಹಳ್ಳಿಗಾಡಿನ ಮಕ್ಕಳ ಭವಿಷ್ಯಕ್ಕೆ ಬುನಾದಿ
ಹಾಕಿರುವ ಮಠವು ಅಕ್ಷರ, ಅಕ್ಷಯ, ಆಸರೆಯಂತಹ ದಾಸೋಹ ನೀಡುತ್ತಿದೆ. ಮಕ್ಕಳ ಜ್ಞಾನದ ಹಸಿವು ತಣಿಸುತ್ತಿರುವ ಸಂಸ್ಥೆಯೊಂದಿಗೆ ಪಾಲಕರು ಕೈಜೋಡಿಸಿದರೆ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣವಾಗಲಿದೆ ಎಂದರು.
ಬಿಜಿಎಸ್ ಶಿಕ್ಷಣ ಸಂಸ್ಥೆಯ ಹೇಮಗಿರಿ ಶಾಖಾ ಮಠದ ಕಾರ್ಯದರ್ಶಿ ಜೆ.ಎನ್. ರಾಮಕೃಷ್ಣೇಗೌಡ ಮಾತನಾಡಿ, ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳ ಆಶಯದಂತೆ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಿ ಮತ್ತಷ್ಟು ದುಡಿಯಲು ಸಂಸ್ಥೆ ಬದ್ಧವಾಗಿದೆ ಎಂದರು. ಕನ್ನಡ ಮಾಧ್ಯಮ ಶಾಲೆಗಳಿಗೆ ಪಾಲಕರು ಸಹಕರಿಸಬೇಕು ಎಂದು ಹೇಳಿದರು.
ಎಸ್ಸೆಸ್ಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ನೀಡಲಾಯಿತು. ಮಕ್ಕಳಿಂದ ಏರ್ಪಡಿಸಿದ್ದ ವಿವಿಧ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ರಂಜಿಸಿದವು. ಮಕ್ಕಳ ವಿರಚಿತ ಚಿಣ್ಣರ ಕುಂಚ ಹಾಗೂ ಜಾಣರ ಸಿರಿ ಸಂಚಿಕೆ, ಸಂಸ್ಥೆಯ ದಿನದರ್ಶಿಕೆ, ಡೈರಿ ಬಿಡುಗಡೆ ಮಾಡಲಾಯಿತು.
ಗ್ರಾಪಂ ಮಾಜಿ ಸದಸ್ಯ ಶ್ರೀನಿವಾಸ್, ಚಾಮುಂಡೇಶ್ವರಿ ಸಹಕಾರ ಸಕ್ಕರೆ ಕಾರ್ಖಾನೆ ನಿರ್ದೇಶಕ ಎ.ಆರ್. ಮಂಜುನಾಥ್, ಮಾಜಿ ನಿರ್ದೇಶಕ ಬಿ.ಎಸ್. ಮಂಜುನಾಥ್ ಮತ್ತಿತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net