ಕೆ.ಆರ್.ಸಾಗರ: ಕೆ.ಆರ್.ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್‌ಗಳ ರೌಡಿ ಪರೇಡ್ ಇತ್ತೀಚೆಗೆ ಠಾಣಾ ಆವರಣದಲ್ಲಿ ನಡೆಯಿತು.
ಕೆ.ಆರ್.ಸಾಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ಆರಕ್ಷಕ ಉಪ ನಿರೀಕ್ಷಕ ಜಗದೀಶ್ ಧೂಳ್‌ಶೆಟ್ಟರ್, ಠಾಣೆ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌ಗಳ ಪರೇಡ್ ನಡೆಸಿ ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸದ ಬಗ್ಗೆ ಮಾಹಿತಿ ಪಡೆದರು.
ತಮ್ಮ ಹಿಂದಿನ ತಪ್ಪನ್ನು ಮರೆತು ಒಳ್ಳೆಯ ದಾರಿಯಲ್ಲಿ ನಡೆಯಬೇಕು, ಜನರಿಗೆ ಬೆದರಿಕೆ ಹಾಕುವುದು, ಹಫ್ತಾ ವಸೂಲಿ ಸೇರಿದಂತೆ ಯಾವುದೇ ಕಾನೂನುಬಾಹಿರ ಚಟುವಟಿಕೆ ನಡೆಸುವುದು ಕಂಡುಬಂದರೆ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.