ಅಧ್ಯಕ್ಷತೆಯನ್ನು ಕೃಷಿಕ ಸಮಾಜದ ಅಧ್ಯಕ್ಷ ನಾಟನಹಳ್ಳಿ ಗಂಗಾಧರ್ ವಹಿಸಿದ್ದರು. ವೇದಿಕೆಯಲ್ಲಿ ಆರ್‌ಟಿಒ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಜಾನಕಿರಾಂ, ಹೆತ್ತಗೋನಹಳ್ಳಿ ನಾರಾಯಣಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಎಸ್.ಎಲ್.ಮೋಹನ್, ಪಿಎಲ್‌ಡಿ ಬ್ಯಾಂಕ್ ಮಾಜಿ ನಿರ್ದೇಶಕ ರಘು, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹೊನ್ನೇನಹಳ್ಳಿ ವೇಣು, ಪದವೀಧರ ಘಟಕದ ಅಧ್ಯಕ್ಷ ಚಿಕ್ಕೋನಹಳ್ಳಿ ಚೇತನ್, ಪ್ರಗತಿಪರ ಮಹಿಳಾ ರೈತ ಮುಖಂಡರಾದ ಪ್ರಮೀಳಾ ವರದರಾಜೇಗೌಡ, ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ್ ಸೇರಿದಂತೆ ಸಾವಿರಾರು ರೈತರು ಉಪಸ್ಥಿತರಿದ್ದರು.