84 ಅಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

ಕೆ.ಆರ್.ಸಾಗರ ಅಣೆಕಟ್ಟೆಯಲ್ಲಿ 84 ಅಡಿ ದಾಟಿರುವುದು.
ಕೆ.ಆರ್.ಸಾಗರ ಅಣೆಕಟ್ಟೆಯಲ್ಲಿ 84 ಅಡಿ ದಾಟಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • 10 ಸಾವಿರ ದಾಟಿದ ಒಳಹರಿವು
ಕೆ.ಆರ್.ಸಾಗರ: ರೈತರ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಮತ್ತೆ ಜೀವಕಳೆ ಬರುತ್ತಿದ್ದು, ಬುಧವಾರ ಸಂಜೆ ವೇಳೆ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 84 ಅಡಿ ತಲುಪಿದೆ. ಒಳಹರಿವಿನ ಪ್ರಮಾಣ 10 ಸಾವಿರ ಕ್ಯೂಸೆಕ್ ದಾಟಿದ್ದು, ಹೊರ ಹರಿವು 790 ಕ್ಯೂಸೆಕ್ ಇದೆ. ಸದ್ಯ 12.485 ಟಿಎಂಸಿ ನೀರಿನ ಸಂಗ್ರಹ ಇದೆ.
ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಹಲವು ದಿನಗಳಿಂದ ಮಳೆಯಾಗುತ್ತಿರುವ ಕಾರಣ ಅಣೆಕಟ್ಟೆಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಬುಧವಾರ ಬೆಳಗ್ಗೆ 5734 ಕ್ಯೂಸೆಕ್ ಇದ್ದ ಒಳಹರಿವು ಸಂಜೆ ವೇಳೆಗೆ ಹೆಚ್ಚಳ ಕಂಡಿದೆ. ಕಳೆದ ವರ್ಷ ಜು.8ರಲ್ಲಿ ಡ್ಯಾಂ ನೀರಿನ ಮಟ್ಟ 122.50 ಕ್ಯೂಸೆಕ್ ಇತ್ತು. ಒಳಹರಿವು 33,107, ಹೊರ ಹರಿವು 29,126 ಕ್ಯೂಸೆಕ್ ದಾಖಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net