ಕೆ.ಆರ್.ಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ (ಎಸ್.ಕ್ಯೂ) ಶಾಲೆಯಲ್ಲಿ ಗುರುವಾರ ಕೆ.ಆರ್.ಸಾಗರ ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಕ್ಲೇ ಮಾಡಲಿಂಗ್ ಮಾಡುತ್ತಿರುವ ವಿದ್ಯಾರ್ಥಿಗಳು.
Published on:
Copied
Follow Us
ಕೆ.ಆರ್.ಸಾಗರ:ಕೆ.ಆರ್.ಸಾಗರ ಗ್ರಾಮದ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ (ಎಸ್.ಕ್ಯೂ) ಶಾಲೆಯಲ್ಲಿ ಗುರುವಾರ ಕೆ.ಆರ್.ಸಾಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಇಸಿಒ ನಂಜುಂಡಾಚಾರ್ ಚಾಲನೆ ನೀಡಿ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.
ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಸೇರಿದಂತೆ 12 ಶಾಲೆಗಳ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು 15 ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರತಿ ಸ್ಪರ್ಧೆಗೆ ಬೇರೆ ಕ್ಲಸ್ಟರ್‌ನ ಶಿಕ್ಷಕರನ್ನು ತೀರ್ಪುಗಾರರನ್ನಾಗಿ ನಿಯೋಜನೆ ಮಾಡಲಾಗಿತ್ತು.
ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಕ್ಷೇತ್ರ ಸಂಪನ್ಮೂನಲ ಸಮನ್ವಯ ಅಧಿಕಾರಿ ಡಾ.ಪ್ರಭಾ, ಬಹುಮಾನ ಪಡೆಯುವುದು ಮಖ್ಯವಲ್ಲ, ತಮ್ಮ ದೈನಂದಿನ ವಿದ್ಯಾಭ್ಯಾಸದ ಜತೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ತೆಗೆದು ಅವರಿಗೆ ಬೆಂಬಲ ನೀಡುವುದು ಮುಖ್ಯವಾಗಿದೆ. ಇದರಲ್ಲಿ ಪಾಲಕರು ಹಾಗೂ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದರು.
ಕೆ.ಆರ್.ಸಾಗರ ಕ್ಲಸ್ಟರ್ ಸಿಆರ್‌ಪಿ ಮಹೇಶ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಎಸ್.ಕ್ಯೂ) ಮುಖ್ಯಶಿಕ್ಷಕಿ ಪುಷ್ಪಾ, ಎಸ್‌ಡಿಎಂಸಿ ಅಧ್ಯಕ್ಷೆ ದಿಪೀಕಾ, ಸದಸ್ಯರು, ವಿವಿಧ ಶಾಲೆ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.