ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ಸಾರ್ವಜನಿಕರ ಅಹವಾಲು ಆಲಿಸಿ ಮಾತನಾಡಿದ ಅವರು, ತಾತ್ಕಾಲಿಕವಾಗಿ ಬಸ್ ನಿಲ್ದಾಣಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಶಾಶ್ವತವಾಗಿ ಅನುಕೂಲಕರ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ನೂತನ ಬಸ್ ನಿಲ್ದಾಣದ ಗುರಿ ಇದೆ. ಇರುವ ನಿಲ್ದಾಣವನ್ನು ಆಧುನೀಕರಣಗೊಳಿಸಿದರೂ, ಸ್ಥಳಾವಕಾಶದ ಕೊರತೆ ಎದುರಾಗುತ್ತದೆ. ಆಧ್ಯರಿಂದ 4.5 ಎಕರೆ ವಿಸ್ತೀರ್ಣವನ್ನು ಹೊಂದಿರುವ ಬಸ್ ಡಿಪೋ ಜಾಗದಲ್ಲೇ ನೂತನ ನಿಲ್ದಾಣವನ್ನು ನಿರ್ಮಿಸುವುದು ಸೂಕ್ತ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.