ಕುವೆಂಪು ಅಧ್ಯಾಪಕರಾಗಿ, ಪ್ರಾಚಾರ್ಯರಾಗಿ, ಶಿಕ್ಷಣ ತಜ್ಞರಾಗಿಯೂ ಶ್ರೇಷ್ಠ ಕೆಲಸ ಮಾಡಿದ್ದಾರೆ. ಕನ್ನಡ ಭಾಷೆಗೆ ಶಕ್ತಿ ನೀಡಿದ್ದಾರೆ. ಶಬ್ದಗಳಲ್ಲಿ ಅವರ ವರ್ಣನೆ ಅಸಾಧ್ಯ. ಜಗದ ಕವಿ, ಯುಗದ ಕವಿ ಎಂದೇ ಜನಮಾನಸದಲ್ಲಿ ಪ್ರಖ್ಯಾತಿಯಾದ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶಗಳು ಇಂದಿಗೂ ಪ್ರಸ್ತುತ, ಅವುಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.