ಲಕ್ಷ್ಮೀ ನರಸಿಂಹಸ್ವಾಮಿ ರಥೋತ್ಸವ ವಿಜೃಂಭಣೆ

ಮಳವಳ್ಳಿ ಪಟ್ಟಣದ ಹೊರವಲಯದಲ್ಲಿರುವ ಲಕ್ಷ್ಮೀ ನರಸಿಂಹಸ್ವಾಮಿ ದೇವಲಯದ ಆವರಣದಲ್ಲಿ ಬುಧವಾರ ವಿಜೃಂಭಣೆಯಿಂದ ರಥೋತ್ಸವ ನೆರವೇರಿತು.
ಮಳವಳ್ಳಿ ಪಟ್ಟಣದ ಹೊರವಲಯದಲ್ಲಿರುವ ಲಕ್ಷ್ಮೀ ನರಸಿಂಹಸ್ವಾಮಿ ದೇವಲಯದ ಆವರಣದಲ್ಲಿ ಬುಧವಾರ ವಿಜೃಂಭಣೆಯಿಂದ ರಥೋತ್ಸವ ನೆರವೇರಿತು.
Published on
ಮಳವಳ್ಳಿ: ಪಟ್ಟಣದ ಹೊರವಲಯದಲ್ಲಿರುವ ಪುರಾಣ ಪ್ರಸಿದ್ಧ ಮಾರೇಹಳ್ಳಿ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ಕಳೆದ 7 ದಿನಗಳಿಂದ ಸಂಪ್ರದಾಯದಂತೆ ದೇವಸ್ಥಾನದಲ್ಲಿ ವಿವಿಧ ಪೂಜೆ ಸೇವಾರ್ಥಗಳು ನೆರವೇರಿತು. ಬುಧವಾರ ಬೆಳಗಿನಿಂದಲೇ ಅರ್ಚಕರು ಲಕ್ಷ್ಮೀ ನರಸಿಂಹಸ್ವಾಮಿಗೆ ವಿವಿಧ ಅಭಿಷೇಕ ನಡೆಸಿ ಪುಷ್ಪಗಳಿಂದ ಅಲಂಕಾರಗೊಳಿಸಿ ಮಹಾ ಮಂಗಳಾರತಿ ಮಾಡಲಾಯಿತು. ನಂತರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಮಂಗಳವಾದ್ಯದೊಂದಿಗೆ ಮೆರವಣಿಗೆ ಮೂಲಕ ದೇವಸ್ಥಾನದ ಆವರಣದಲ್ಲಿ ಸಿಂಗರಿಸಲಾಗಿದ್ದ ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.
ಮಧ್ಯಾಹ್ನ 1.55ರ ಶುಭ ಲಗ್ನದಲ್ಲಿ ರಥೋತ್ಸವಕ್ಕೆ ತಹಸೀಲ್ದಾರ್ ಲೋಕೇಶ್ ಚಾಲನೆ ನೀಡಿದರು. ಬಳಿಕ ಭಕ್ತಸಮೂಹ ವಿವಿಧ ಘೋಷಣೆಗಳೊಂದಿಗೆ ರಥದ ಹಗ್ಗ ಹಿಡಿದು ದೇವಸ್ಥಾನ ಸುತ್ತಲೂ ಪ್ರದಕ್ಷಿಣೆಯಾಗಿ ಎಳೆತಂದರು. ಈ ವೇಳೆ ನವದಂಪತಿ, ಹರಕೆ ಹೊತ್ತ ಭಕ್ತರು ರಥೋತ್ಸವಕ್ಕೆ ಹಣ್ಣು, ಜವನ ಎಸೆದು ಪ್ರಾರ್ಥಿಸಿದರು.
ರಥೋತ್ಸವದ ಅಂಗವಾಗಿ ದೇವಾಲಯದ ಆವರಣದ ಅಲ್ಲಲ್ಲಿ ಅನ್ನ ಪ್ರಸಾದ ವಿತರಣೆ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net