ಪ್ರತಿ ಗ್ರಾಮಕ್ಕೂ ಅಭಿವೃದ್ಧಿಯ ಸ್ಪರ್ಶ: ಶಾಸಕ ಪಿ.ರವಿಕುಮಾರ್ ಗಣಿಗ ಹೇಳಿಕೆ

ಮಂಡ್ಯ ತಾಲೂಕಿನ ಈಚಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಗಣಿಗ ಭೂಮಿ ಪೂಜೆ ನೆರವೇರಿಸಿದರು
ಮಂಡ್ಯ ತಾಲೂಕಿನ ಈಚಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಗಣಿಗ ಭೂಮಿ ಪೂಜೆ ನೆರವೇರಿಸಿದರು
Published on

ಪ್ರಮುಖ ಮುಖ್ಯಾಂಶಗಳು

  • ಡಣಾಯಕನಪುರದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಅಭಿವೃದ್ಧಿಯ ಸ್ಪರ್ಶ ನೀಡಲಾಗುತ್ತಿದೆ. ಇದು ನನ್ನ ಬದ್ಧತೆ ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಹೇಳಿದರು.
ತಾಲೂಕಿನ ನಲ್ಲಹಳ್ಳಿ ಗ್ರಾಮದಲ್ಲಿ 10 ಲಕ್ಷ ರೂ ಹಾಗೂ 5 ಕೋಟಿ ರೂ ವೆಚ್ಚದಲ್ಲಿ ಈಚೆಗೆರೆ ಗ್ರಾಮದಿಂದ ಡಣಾಯಕನಪುರಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರದ ಜನರ ಆಶೀರ್ವಾದ ಮತ್ತು ವಿಶ್ವಾಸದ ಋಣ ನನ್ನ ಹಾಗೂ ಕಾಂಗ್ರೆಸ್ ಪಕ್ಷದ ಮೇಲಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಗ್ರಾಮೀಣ ಭಾಗದ ರಸ್ತೆ, ಕುಡಿಯುವ ನೀರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿದ್ದೇನೆ ಎಂದರು.
ಅಂತೆಯೇ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ಮಾಹಿತಿ ಪಡೆದುಕೊಳ್ಳಿ. ಪ್ರತಿ ಅರ್ಹ ಮತದಾರರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ತಮ್ಮ ನೋಂದಣಿಯನ್ನು ಖಚಿತಪಡಿಸಿಕೊಳ್ಳಬೇಕು. ಮತದಾನ ಪ್ರಜಾಪ್ರಭುತ್ವದ ಅತ್ಯಮೂಲ್ಯ ಹಕ್ಕು. ಅದನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು ಎಂದು ಮನವಿ ಮಾಡಿದ ಅವರು, ಮತದಾರರಿಗೆ ಯಾವುದೇ ರೀತಿಯ ತೊಂದರೆ ಉಂಟಾದಲ್ಲಿ ಪ್ರತಿಯೊಂದು ಬೂತ್ ವ್ಯಾಪ್ತಿಯಲ್ಲೂ ಕಾಂಗ್ರೆಸ್ ಪಕ್ಷದ ವತಿಯಿಂದ ಸಹಾಯಕರನ್ನು ನಿಯೋಜಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ಅಗತ್ಯವಿರುವವರು ಬಳಸಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯುವಂತೆ ಹೇಳಿದರು.
ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರು, ಹನುಮೇಗೌಡ, ಶಂಕರ, ವಕೀಲ ಅರುಣ್ ಇತರರಿದ್ದರು.
ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇದೀಗ ಚಾಲನೆ ದೊರೆತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಅಂತೆಯೇ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net