ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ

ಮದ್ದೂರು ತಾಲೂಕು ಮರಕಾಡದೊಡ್ಡಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಗೊರವನಹಳ್ಳಿ ರಾಘವ, ಅರುಣ್‌ಕುಮಾರ್, ಶಿವರಾಮು ಇದ್ದರು.
ಮದ್ದೂರು ತಾಲೂಕು ಮರಕಾಡದೊಡ್ಡಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಗೊರವನಹಳ್ಳಿ ರಾಘವ, ಅರುಣ್‌ಕುಮಾರ್, ಶಿವರಾಮು ಇದ್ದರು.
Published on
ಮದ್ದೂರು: ಗ್ರಾಮೀಣ ಭಾಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ತಾಲೂಕಿನ ಅಂಗನವಾಡಿ ಕಟ್ಟಡಗಳನ್ನು ಸಿಆರ್‌ಎಸ್ ನಿಧಿಯಿಂದ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಮರಕಾಡದೊಡ್ಡಿ ಗ್ರಾಮದಲ್ಲಿ ಸಾಯಿ ಗಾಮೆರ್ಂಟ್ಸ್ ವತಿಯಿಂದ ಸಿಆರ್‌ಎಸ್ ಅನುದಾನದಡಿ ನೂತನ ಅಂಗನವಾಡಿ ಕಟ್ಟಡ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣ, ಪಾಲನೆ, ಆರೈಕೆ, ಸೇವೆಗಳ ವಿಸ್ತರಣೆಗೆ ಹೆಚ್ಚು ಒತ್ತು ನೀಡಲಾಗಿದೆ. ತಾಲೂಕಿನಲ್ಲಿ ಕಟ್ಟಡ ಇಲ್ಲದ ಅಂಗನವಾಡಿಗಳಿಗೆ ಶೀಘ್ರ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲು ಸರ್ಕಾರದಿಂದ ಅನುದಾನ ತರಲು ಕ್ರಿಯಾ ಯೋಜನೆ ಸಿದ್ಧಪಡಿಸಿದ್ದೇವೆ ಎಂದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗೊರವನಹಳ್ಳಿ ರಾಘವ, ಶಿಶು ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್, ಶಿವರಾಮು, ವಿಸ್ತರಣಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net