ಚಿಕ್ಕದೊಡ್ಡಿ ಗ್ರಾಮದಲ್ಲಿ ಚಿರತೆ ಸೆರೆ

ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದಲ್ಲಿ ಬೋನಿನಲ್ಲಿಟ್ಟಿದ್ದ ನಾಯಿಯನ್ನು ತಿನ್ನಲು ಬಂದ ಚಿರತೆ ಸೆರೆಯಾಗಿದೆ.
ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದಲ್ಲಿ ಬೋನಿನಲ್ಲಿಟ್ಟಿದ್ದ ನಾಯಿಯನ್ನು ತಿನ್ನಲು ಬಂದ ಚಿರತೆ ಸೆರೆಯಾಗಿದೆ.
Published on

ಪ್ರಮುಖ ಮುಖ್ಯಾಂಶಗಳು

  • Leopard
ಮದ್ದೂರು: ತಾಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದಲ್ಲಿ ಬೋನಿನಲ್ಲಿದ್ದ ನಾಯಿಯನ್ನು ತಿನ್ನಲು ಬಂದ ಚಿರತೆ ಸೋಮವಾರ ರಾತ್ರಿ ಸೆರೆಯಾಗಿದೆ.
ಗ್ರಾಮದ ಹೊನ್ನೇಗೌಡ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಚಿರತೆ ಸಿಕ್ಕಿ ಬಿದ್ದಿದ್ದು, ಹಲವು ದಿನಗಳಿಂದ ಚಿಕ್ಕದೊಡ್ಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಚಿರತೆಯ ದಾಳಿಯಿಂದ ಈ ಭಾಗದ ಗ್ರಾಮಸ್ಥರು ಕಂಗಾಲಾಗಿದ್ದರು. ಚಿರತೆ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಹಲವು ಮಾಡಿ ಮನವಿ ಮಾಡಿದ್ದರು.
ಚಿರತೆ ಸೆರೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಈ ಭಾಗದಲ್ಲಿ ಇನ್ನು ಹಲವಾರು ಚಿರತೆಗಳು ಇದ್ದು ಅವುಗಳನ್ನು ಹಿಡಿಯಲು ಅರಣ್ಯಾಧಿಕಾರಿಗಳು ಆಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಸ್ಥಳಕ್ಕೆ ತಾಲೂಕು ಅರಣ್ಯಾಧಿಕಾರಿ ಗವಿಯಪ್ಪ, ಉಪ ವಲಯ ಅರಣ್ಯಾಧಿಕಾರಿ ಸವಿತಾ, ಗಸ್ತುಪಾಲಕ ಚಿನ್ನಪ್ಪ ಹಾಗೂ ಸಿಬ್ಬಂದಿ ಆಗಮಿಸಿ ಚಿರತೆ ಸೆರೆ ಹಿಡಿದು ಮೇಲಾಧಿಕಾರಿಗಳ ಆದೇಶ ಮೇರೆಗೆ ಚಿರತೆಯನ್ನು ಬಂಡಿಪುರ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net