ಬೋನಿಗೆ ಬಿದ್ದ ಚಿರತೆ

ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಕೆಸ್ತೂರು ಸಮೀಪದ ಸಿದ್ದೆಗೌಡನದೊಡ್ಡಿ ಗ್ರಾಮದಲ್ಲಿ ಚಿರತೆ ಬೋನಿಗೆ ಸೆರೆಯಾಗಿದೆ.
ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಕೆಸ್ತೂರು ಸಮೀಪದ ಸಿದ್ದೆಗೌಡನದೊಡ್ಡಿ ಗ್ರಾಮದಲ್ಲಿ ಚಿರತೆ ಬೋನಿಗೆ ಸೆರೆಯಾಗಿದೆ.
Published on
ಮದ್ದೂರು: ತಾಲೂಕಿನ ಆತಗೂರು ಹೋಬಳಿಯ ಕೆಸ್ತೂರು ಸಮೀಪದ ಸಿದ್ದೆಗೌಡನದೊಡ್ಡಿ ಗ್ರಾಮದಲ್ಲಿ ಚಿರತೆ ಶನಿವಾರ ರಾತ್ರಿ ಬೋನಿಗೆ ಸೆರೆಯಾಗಿದೆ.
ಬೋನಿನಲ್ಲಿಟ್ಟದ್ದ ನಾಯಿಯನ್ನು ತಿನ್ನಲು ಬಂದು 6 ವರ್ಷದ ಗಂಡು ಚಿರತೆ ಬೋನಿಗೆ ಸಿಕ್ಕಿ ಬಿದ್ದಿದೆ. ಚಿರತೆ ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹಾಗೂ ಜಾನುವಾರುಗಳನ್ನು ಬಲಿ ಪಡೆಯುತ್ತಿತ್ತು. ಗ್ರಾಮಸ್ಥರ ದೂರಿನ ಮೇರೆಗೆ 12 ದಿನಗಳ ಹಿಂದೆ ಅರಣ್ಯಾಧಿಕಾರಿಗಳು ಬೋನು ಇಟ್ಟಿದ್ದರು. ಚಿರತೆ ಸೆರೆಯಿಂದ ಗ್ರಾಮಸ್ಥರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.
ಸ್ಥಳಕ್ಕೆ ತಾಲೂಕು ವಲಯ ಅರಣ್ಯಾಧಿಕಾರಿ ಗವಿಯಪ್ಪ, ಉಪ ವಲಯ ಅರಣ್ಯಾಧಿಕಾರಿ ಸವಿತಾ ಹಾಗೂ ಗಸ್ತು ಪಾಲಕ ಚಿನ್ನಪ್ಪ ಅವರು ಚಿರತೆಯನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ದೂರದ ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net