ಶಾಲಾ ಹಂತದಲ್ಲಿಯೇ ನಾಯಕತ್ವ ಗುಣ ಬೆಳೆಯಲಿ

ಕೆ.ಎಂ.ದೊಡ್ಡಿಯ ಭಾರತೀ ಕಾಲೇಜಿನ ಕುವೆಂಪು ಸಭಾಗಂಣದಲ್ಲಿ ಭಾರತೀ ಸ್ಕೂಲ್ ಆಫ್ ಎಕ್ಸಲೆನ್ಸ್‌ನಲ್ಲಿ ವಿದ್ಯಾರ್ಥಿ ನಾಯಕತ್ವ ಪದಗ್ರಹಣ (ಇನ್‌ವೆಸ್ಟಿಚರ್) ಸಮಾರಂಭ ಜರುಗಿತು. ಸಂಸ್ಥೆಯ ಚೇರ‌್ಮನ್ ಮಧು ಜಿ.ಮಾದೇಗೌಡ, ಪ್ರಾಂಶುಪಾಲೆ ಸಿ. ರಮ್ಯಾ, ಪ್ರೊ.ಎಸ್. ನಾಗರಾಜ್, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಕೆ.ಎಂ.ದೊಡ್ಡಿಯ ಭಾರತೀ ಕಾಲೇಜಿನ ಕುವೆಂಪು ಸಭಾಗಂಣದಲ್ಲಿ ಭಾರತೀ ಸ್ಕೂಲ್ ಆಫ್ ಎಕ್ಸಲೆನ್ಸ್‌ನಲ್ಲಿ ವಿದ್ಯಾರ್ಥಿ ನಾಯಕತ್ವ ಪದಗ್ರಹಣ (ಇನ್‌ವೆಸ್ಟಿಚರ್) ಸಮಾರಂಭ ಜರುಗಿತು. ಸಂಸ್ಥೆಯ ಚೇರ‌್ಮನ್ ಮಧು ಜಿ.ಮಾದೇಗೌಡ, ಪ್ರಾಂಶುಪಾಲೆ ಸಿ. ರಮ್ಯಾ, ಪ್ರೊ.ಎಸ್. ನಾಗರಾಜ್, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • leadership qualities
ಕೆ.ಎಂ.ದೊಡ್ಡಿ: ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು, ಸೇವಾ ಮನೋಭಾವ ಹಾಗೂ ಜವಾಬ್ದಾರಿಯುತ ವ್ಯಕ್ತಿತ್ವವನ್ನು ಬೆಳೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ, ಭಾರತೀ ಶಿಕ್ಷಣ ಸಂಸ್ಥೆಯ ಚೇರ‌್ಮನ್ ಮಧು ಜಿ.ಮಾದೇಗೌಡ ಕಿವಿಮಾತು ಹೇಳಿದರು.
ಇಲ್ಲಿನ ಭಾರತೀ ಕಾಲೇಜಿನ ಕುವೆಂಪು ಸಭಾಗಂಣದಲ್ಲಿ ಭಾರತೀ ಸ್ಕೂಲ್ ಆಫ್ ಎಕ್ಸಲೆನ್ಸ್‌ನಲ್ಲಿ ವಿದ್ಯಾರ್ಥಿ ನಾಯಕತ್ವ ಪದಗ್ರಹಣ (ಇನ್‌ವೆಸ್ಟಿಚರ್) ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವ ನಿಟ್ಟಿನಲ್ಲಿ ಶಾಲೆಯಲ್ಲಿ ಕಾರ್ಯಕ್ರಮ ಆಯೋಜಿಸಿರುವುದು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣ ಮಾಡಲು ನೆರವಾಗುತ್ತದೆ ಎಂದರು.
ನಾಯಕತ್ವ ಪಡೆಯುವುದು ಸುಲಭ. ಆದರೆ ಅದನ್ನು ಪ್ರಾಮಾಣಿಕತೆ, ಶಿಸ್ತು ಹಾಗೂ ಸೇವಾ ಮನೋಭಾವದ ಮೂಲಕ ಉಳಿಸಿಕೊಳ್ಳುವುದೇ ನಿಜವಾದ ಸಾಧನೆ. ನಾಯಕತ್ವ ಎಂದರೆ ಅಧಿಕಾರವಲ್ಲ, ಅದು ಜವಾಬ್ದಾರಿ. ವಿದ್ಯಾರ್ಥಿಗಳು ತಮ್ಮ ನಡವಳಿಕೆಯ ಮೂಲಕ ಶಾಲೆ, ಪಾಲಕರು ಹಾಗೂ ಸಮಾಜಕ್ಕೆ ಹೆಮ್ಮೆ ತರುವ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ವಿದ್ಯಾರ್ಥಿ ಪರಿಷತ್ ಚುನಾವಣೆಯಲ್ಲಿ ಭಾಗವಹಿಸುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ, ಚುನಾವಣಾ ಪ್ರಕ್ರಿಯೆ ಹಾಗೂ ನಾಯಕತ್ವದ ಮೌಲ್ಯಗಳನ್ನು ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಅರಿಯುತ್ತಾರೆ. ಶಾಲಾ ಹಂತದಲ್ಲೇ ಇಂತಹ ಅವಕಾಶಗಳು ದೊರೆಯುವುದು ಅವರ ಭವಿಷ್ಯದ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಭಾಗವಹಿಸುವ ಮೂಲಕ ಚುನಾವಣೆ ಯಾವ ರೀತಿ ನಡೆಯುತ್ತದೆ ಎಂಬುದನ್ನು ನೀವು ಪ್ರಾಯೋಗಿಕವಾಗಿ ತಿಳಿದುಕೊಂಡಿದ್ದೀರಿ. ನೀವು ಭಾರತೀ ಎಜುಕೇಷನ್ ಟ್ರಸ್ಟ್‌ಗೆ ಮಾತ್ರವಲ್ಲ, ಈ ಭಾಗದ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದೀರಿ. ಸಮಯವನ್ನು ವ್ಯರ್ಥ ಮಾಡದೆ ಪಠ್ಯದ ಜತೆಗೆ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಇತರ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದೇ ನಿಮ್ಮ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀ ಸ್ಕೂಲ್ ಆಫ್ ಎಕ್ಸಲೆನ್ಸ್‌ನ ಪ್ರಾಂಶುಪಾಲೆ ಸಿ. ರಮ್ಯಾ ಮಾತನಾಡಿ, ಇನ್‌ವೆಸ್ಟಿಚರ್ ಸಮಾರಂಭವು ಕೇವಲ ಹುದ್ದೆಗಳನ್ನು ನೀಡುವ ಕಾರ್ಯಕ್ರಮವಲ್ಲ. ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಶಿಸ್ತು, ಪ್ರಾಮಾಣಿಕತೆ ಹಾಗೂ ಜವಾಬ್ದಾರಿಯುತ ನಾಗರಿಕತ್ವದ ಮೌಲ್ಯಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ಹೇಳಿದರು.
ಈ ವೇಳೆ ಶಾಲಾ ಮುಖ್ಯ ನಾಯಕನಾಗಿ ಸಾತ್ವಿಕ್ ಜೆ. ಗೌಡ, ಮುಖ್ಯ ನಾಯಕಿಯಾಗಿ ಬಿ.ಕೆ. ಪೂಜಾ , ಸಹಾಯಕ ಮುಖ್ಯ ನಾಯಕನಾಗಿ ಎಂ. ಪ್ರಣವ್, ಸಹಾಯಕ ಮುಖ್ಯ ನಾಯಕಿಯಾಗಿ ಬಿ.ಎಸ್. ಪೂಜಿತಾ, ಕ್ರೀಡಾ ಕಾರ್ಯದರ್ಶಿಗಳಾಗಿ ಎಚ್.ಎನ್. ಪ್ರಥಮ್. ಹಾಗೂ ಡಿ. ತನ್ವಿತಾ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಟಿ.ಡಿ. ನಮೀಶ್ ಗೌಡ. ಹಾಗೂ ಬಿ.ಆರ್. ಮನ್ವಿತಾ, ಸಾಹಿತ್ಯ ಕಾರ್ಯದರ್ಶಿಗಳಾಗಿ ಡಿ.ಎಸ್ ಯಶಸ್ ಗೌಡ. ಹಾಗೂ ಜಿ.ಪಿ ಪುಣ್ಯಶ್ರೀ, ಶಿಸ್ತು ಪರಿಪಾಲನಾ ಪ್ರಿಫೆಕ್ಟ್‌ಗಳಾಗಿ ಎಚ್.ಕೆ. ಶಮಂತ್ ಗೌಡ, ಸಿ.ಎಂ. ಪ್ರಣೀತಾ ಹಾಗೂ ಮೋಹನ್ ಗೌಡ ಅಧಿಕಾರ ಸ್ವೀಕರಿಸಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಭರತನಾಟ್ಯ, ಕಥಕ್, ಕಥಕಳಿ, ಕುಚಿಪುಡಿ, ಒಡಿಸ್ಸಿ, ಮಣಿಪುರಿ ಹಾಗೂ ಮೋಹಿನಿಯಾಟ್ಟಂ ಸೇರಿದಂತೆ ಭಾರತದ ಶಾಸ್ತ್ರೀಯ ನೃತ್ಯಗಳ ಮೂಲಕ ದೇಶದ ಸಾಂಸ್ಕೃತಿಕ ಪರಂಪರೆ, ಜನಜೀವನ ಹಾಗೂ ಧಾರ್ಮಿಕ ನಂಬಿಕೆಗಳನ್ನು ಮನೋಜ್ಞವಾಗಿ ಪ್ರದರ್ಶಿಸಿದರು.
ಇದೇ ವೇಳೆ ಭಾರತದ ವಿವಿಧ ರಾಜ್ಯಗಳ ಸಾಂಪ್ರದಾಯಿಕ ವೇಷಭೂಷಣಗಳನ್ನು ಧರಿಸಿದ ವಿದ್ಯಾರ್ಥಿಗಳು ಭಾರತದ ವಿಶಿಷ್ಟ ಪರಂಪರೆಯನ್ನು ಅನಾವರಣಗೊಳಿಸಿ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದಲ್ಲಿ ಭಾರತೀ ಸ್ನಾತಕೋತ್ತರ ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ.ಎಸ್. ನಾಗರಾಜ್, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪಾಲಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net