ಪಾಂಡವಪುರ ತಾಲೂಕಿನ ಎಸ್‌ಟಿಜಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳು ಸಿ.ಎಸ್.ಪುಟ್ಟರಾಜು ಅವರನ್ನು ಸನ್ಮಾನಿಸಿದರು. ಡಾ.ನಿಶಾಂತ್ ಎ.ನಾಯ್ಡು, ಸಿ.ಪಿ.ಶಿವರಾಜ, ನಿವೇದಿತಾ ನಾಗೇಶ್ ಇತರರಿದ್ದರು.
ಪಾಂಡವಪುರ: ಗ್ರಾಮೀಣ ವಿದ್ಯಾರ್ಥಿಗಳು ಬೆಂಗಳೂರಿನಂತಹ ನಗರದಲ್ಲಿ ಉತ್ತಮ ಸಂಬಳ ಪಡೆದು ಕೆಲಸ ನಿರ್ವಹಿಸುತ್ತಿರುವುದು ಸಂತಸದ ವಿಷಯ ಎಂದು ಎಸ್‌ಟಿಜಿ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸಿ.ಎಸ್.ಪುಟ್ಟರಾಜು ಹೇಳಿದರು.
ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಘಟಕದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ವಿದ್ಯಾರ್ಥಿಗಳು ಪರಿಶ್ರಮದಿಂದ ಉನ್ನತ ವ್ಯಾಸಂಗ ಪಡೆದು ದೊಡ್ಡ ದೊಡ್ಡ ನಗರಗಳಲ್ಲಿನ ಉತ್ತಮ ಕಂಪನಿಗಳಲ್ಲಿ ಕೆಲಸ ಪಡೆದುಕೊಂಡಿರುವುದು ಹೆಮ್ಮೆಯ ವಿಚಾರ. ಈ ಮಾತನ್ನು ಗ್ರಾಮೀಣ ವಿದ್ಯಾರ್ಥಿಗಳ ಬಾಯಿಂದ ಕೇಳಿದಾಗ ಆಗುವ ಸಂತಸಕ್ಕೆ ಪಾರವೇ ಇಲ್ಲ. ಪಾಲಕರ ಭರವಸೆಯನ್ನು ಈಡೇರಿಸಿ ಉತ್ತಮ ಬದುಕು ಕಟ್ಟಿಕೊಂಡು ಪ್ರತಿಯೊಬ್ಬರೂ ಉತ್ತಮ ಪ್ರಜೆಯಾಗಬೇಕು ಎಂಬುದು ನಮ್ಮ ಆಶಯ ಎಂದರು.
ಕಾಲೇಜು ಪ್ರಾಂಶುಪಾಲ ಡಾ.ನಿಶಾಂತ್ ಎ.ನಾಯ್ಡು ಮಾತನಾಡಿ, ಸಿ.ಎಸ್.ಪುಟ್ಟರಾಜು ಅವರು ಶಿಕ್ಷಣ ಸಂತ. ನಮ್ಮ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಅಗತ್ಯ ವಾತಾವರಣ ನಿರ್ಮಿಸಲು ಸದಾ ಸಿದ್ಧರಿದ್ದಾರೆ. ವಿದ್ಯಾರ್ಥಿಗಳು ಅದನ್ನು ಸದುಪಯೋಗ ಪಡಿಸಿಕೊಂಡು ಗುರಿ ಸಾಧಿಸಬೇಕು ಎಂದರು.
ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಪಿ.ಶಿವರಾಜ, ಆಡಳಿತಾಧಿಕಾರಿ ನಿವೇದಿತಾ ನಾಗೇಶ್ ಇತರರು ಇದ್ದರು.