ಹೋರಾಟಗಾರರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ

ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಮರಣೆ ಕಾರ್ಯಕ್ರಮದಲ್ಲಿ ಗ್ರಾಮದ ನಾಲ್ವರು ಬಡ ಹೆಣ್ಣು ಮಕ್ಕಳಿಗೆ ಬಾಂಡ್ ಅನ್ನು ಬಿ.ಶಂಕರ್ ಬಾಬು ವಿತರಿಸಿದರು. ಬಳ್ಳೆಕೆರೆ ಪ್ರಾಶಾಂತ್, ಸಿ.ಸ್ವಾಮಿಗೌಡ, ವೀಣಾಬಾಯಿ, ಛಾಯಾದೇವಿ ಇದ್ದರು.
ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಮರಣೆ ಕಾರ್ಯಕ್ರಮದಲ್ಲಿ ಗ್ರಾಮದ ನಾಲ್ವರು ಬಡ ಹೆಣ್ಣು ಮಕ್ಕಳಿಗೆ ಬಾಂಡ್ ಅನ್ನು ಬಿ.ಶಂಕರ್ ಬಾಬು ವಿತರಿಸಿದರು. ಬಳ್ಳೆಕೆರೆ ಪ್ರಾಶಾಂತ್, ಸಿ.ಸ್ವಾಮಿಗೌಡ, ವೀಣಾಬಾಯಿ, ಛಾಯಾದೇವಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಂಡ್ಯ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಶಂಕರ್ ಬಾಬು ಆಶಯ
ಶ್ರೀರಂಗಪಟ್ಟಣ: ನಾಡಿನ ಸರ್ಕಾರಿ ಕನ್ನಡ ಶಾಲೆಗಳ ಉಳಿವು ಜತೆಗೆ ಬಡ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲು ಹೋರಾಟಗಾರರು ಸಹ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಸೇರಿಸಿ ವಿದ್ಯಾಭ್ಯಾಸಕೊಡಿಸಬೇಕು ಹಾಗೂ ಹೆಣ್ಣು ಮಕ್ಕಳನ್ನು ಶಾಲೆಗೆ ದಾಖಲಿಸಬೇಕು ಎಂದು ಮಂಡ್ಯ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಶಂಕರ್ ಬಾಬು ತಿಳಿಸಿದರು.
ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ಶ್ರೀಮಾತೆ ಶಾರದಾದೇವಿ ಅವರ 173ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಸ್ಮರಣೆ ಕಾರ್ಯಕ್ರಮದಲ್ಲಿ ನಾಲ್ವರು ಬಡ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಬ್ಯಾಂಕಿನಲ್ಲಿ ಠೇವಣಿ ಇರಿಸಿದ ಬಾಂಡ್‌ಅನ್ನು ವಿತರಿಸಿ ಅವರು ಮಾತನಾಡಿದರು.
ರಾಮಕೃಷ್ಣ ಪರಮಹಂಸರಂತೆ ಅವರ ಪತ್ನಿ ಶ್ರೀಮಾತೆ ಶಾರದದೇವಿ ಅಮ್ಮನವರು ಸಹ ಬಡಜನರಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಶಿಕ್ಷಣ ದಾನ ಮಾಡಿ  ಅರಿವು ನೀಡಿ ಅವರ ಮೇಲಾಗುತ್ತಿದ್ದ ಶೋಷಣೆಯಿಂದ ಮುಕ್ತಗೊಳಿಸಿದರು. ರಾಜ್ಯ ಸರ್ಕಾರ ನಾಡಿನಾದ್ಯಂತ ಸರ್ಕಾರಿ ಶಾಲೆಗಳನ್ನು ಮುಚ್ಚುವ ಬದಲು ಅವಶ್ಯ ಸೌಲಭ್ಯಗಳ ಕಲ್ಪಿಸಿ ಅಭಿವೃದ್ಧಿಗೊಳಿಸಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಬೇಕಿದ್ದು, ಅದಕ್ಕೆ ಅನುಗುಣವಾಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯು ಪಾಲಕರಿಂದ ಪ್ರಗತಿ ಕಾಣಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರು ಹಾಗೂ ಹೋರಾಟಗಾರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಗ್ರಾಮೀಣ ಭಾಗದಲ್ಲಿ ಹೆಣ್ಣುಮಕ್ಕಳ ಸಂತಾನ ಹಾಗೂ ಶಿಕ್ಷಣ ಪ್ರೋತ್ಸಾಹಕ್ಕಾಗಿ ತಾಯಿ ಶಾರದಾ ಮಾತೆಯವರ ಆಶೀರ್ವಾದದಿಂದ 4 ಬಡ ಹೆಣ್ಣುಮಕ್ಕಳ ಶೈಕ್ಷಣಿಕ ಅಭ್ಯುದಯ ಹಾಗೂ ಉತ್ತಮ ಭವಿಷ್ಯಕ್ಕಾಗಿ ಹೆಸರಲ್ಲಿ ಬ್ಯಾಂಕಿನಲ್ಲಿ 5 ಸಾವಿರ ರೂ. ಠೇವಣಿ ಇಟ್ಟಿದ್ದು, ಆ ಮಕ್ಕಳ ಪಾಲಿನ ಬಾಂಡ್‌ಗಳನ್ನು ಹಸ್ತಾಂತರಿಸಲಾಗುತ್ತಿದೆ ಎಂದರು.
ಶಾಲೆಯ  ಪ್ರಾಂಶುಪಾಲೆ ಹೇಮಲತಾ ಅರೆಯಾಳ್, ಮುಖ್ಯಶಿಕ್ಷಕಿ ಸರೋಜಮ್ಮ, ಕನ್ನಡಪರ ಹೋರಾಟಗಾರ ಸಿ.ಸ್ವಾಮಿಗೌಡ, ಮುಖಂಡರಾದ ಕೂಡಲಕುಪ್ಪೆ ಕುಮಾರ್, ನಾಗೇಂದ್ರ, ಮರವೇ ಗೌರವ ಅಧ್ಯಕ್ಷ ಬಳ್ಳೆಕೆರೆ ಶ್ರೀಕಾಂತ್, ಪದಾಧಿಕಾರಿಗಳಾದ ಅಂಕಶೆಟ್ಟಿ, ಛಾಯಾದೇವಿ, ವೀಣಾಬಾಯಿ, ಭಾಗ್ಯಮ್ಮ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net