ಮದ್ದೂರು ತಾಲೂಕಿನ ಕೂಳಗೆರೆ ಗೇಟ್‌ನಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರಗಳನ್ನು ವಿತರಣೆ ಮಾಡಲಾಯಿತು. ಯೋಗೇಶ್, ಧನಂಜಯ, ಡೆಲ್ಲಿಸ್ ಮೇರಿನಾ, ನಾಗರಾಜು, ಬಿ.ಜಿ.ನಾಗರಾಜು ಇದ್ದರು.
ಮದ್ದೂರು: ತಾಲೂಕಿನ ಕೂಳಗೆರೆ ಗೇಟ್‌ನಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ನಡೆಯಿತು.
ಡಯಟ್ ಪ್ರಾಂಶುಪಾಲ ಯೋಗೇಶ್, ಬಿಇಒ ಧನಂಜಯ ಡಯಟ್ ಉಪನ್ಯಾಸಕರಾದ ಡಿಲ್ಲಿಸ್ ಮೇರಿನಾ, ಉಪನ್ಯಾಸಕ ಬಿ.ಜಿ.ನಾಗರಾಜು ಸೇರಿದಂತೆ ಇತರರು ಶಾಲಾ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.ಹಾಗೂ ಇದೇ ವೇಳೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ, ಸಮವಸ್ತ್ರಗಳನ್ನು ವಿತರಿಸಲಾಯಿತು.
ಡಯಟ್ ಪ್ರಾಂಶುಪಾಲ ಯೋಗೇಶ್ ಮಾತನಾಡಿ, ಶಾಲೆಯಲ್ಲಿ ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದ್ದು, ಈ ವರ್ಷವು ಉತ್ತಮ ಸಾಧನೆ ಮಾಡಲು ಶಿಕ್ಷಕರು ಅವಿರತವಾಗಿ ಶ್ರಮಿಸಬೇಕು. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಕಠಿಣ ವ್ಯಾಸಂಗ ಮಾಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದು ಶಿಕ್ಷಕರಿಗೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕೆಂದು ಕಿವಿ ಮಾತು ಹೇಳಿದರು.
ಮುಖ್ಯ ಶಿಕ್ಷಕ ಎನ್. ನಾಗರಾಜು, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪಾಲಕರು ಇದ್ದರು.