ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಭಾನುವಾರ ಮಗುವಿಗೆ ಲಸಿಕೆ ಹಾಕುವ ಮೂಲಕ ಶಾಸಕ ಎಚ್.ಟಿ.ಮಂಜು ಚಾಲನೆ ನೀಡಿದರು.
ಕೆ.ಆರ್.ಪೇಟೆ: ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಎಚ್.ಟಿ.ಮಂಜು ಚಾಲನೆ ನೀಡಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೋ ಹನಿಯನ್ನು ತಪ್ಪದೆ ಹಾಕಿಸಬೇಕು. ಯಾವ ಮಗುವೂ ಪೋಲಿಯೋ ಹನಿಯಿಂದ ವಂಚಿತವಾಗದಂತೆ ಆಶಾ ಕಾರ್ಯಕರ್ತರು, ಪಾಲಕರು ನೋಡಿಕೊಳ್ಳಬೇಕು. ಆ ಮೂಲಕ ಪೋಲಿಯೋಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ತಹಸೀಲ್ದಾರ್ ಡಾ.ಅಶೋಕ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಜಿತ್, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಮಂಜುಳಾ, ಆಸ್ಪತ್ರೆ ಸಿಬ್ಬಂದಿ ಸತೀಶ್‌ಬಾಬು, ಕಿಶೋರ್ ಸೇರಿ ಹಲವರಿದ್ದರು.