ಆತ್ಮಹತ್ಯೆಗೆ ಯತ್ನಿಸಿದ್ದ ಎಲ್‌ಐಸಿ ಪ್ರತಿನಿಧಿ ಸಾವು

 ಪ್ರಭಾಕರ್
ಪ್ರಭಾಕರ್
Published on
ಮಳವಳ್ಳಿ: ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ತಾಲೂಕಿನ ನೆಟ್ಕಲ್ ಗ್ರಾಮದ ನಿವಾಸಿ ಲೇ.ನಿಂಗೇಗೌಡ ಎಂಬುವರ ಪುತ್ರ ಪ್ರಭಾಕರ್ (60) ಚಿಕಿತ್ಸೆಗೆ ಸ್ಪಂದಿಸದೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟರು.
ಮಳವಳ್ಳಿ ಪಟ್ಟಣದ ಎನ್‌ಇಎಸ್ ಬಡಾವಣೆಯಲ್ಲಿ ನೆಲೆಸಿದ್ದ ಇವರು ಎಲ್‌ಐಸಿ (ಭಾರತೀಯ ಜೀವವಿಮಾ ನಿಗಮ) ದ ಪ್ರತಿನಿಧಿಯಾಗಿ ಕಾರ್ಯನಿರ್ವಸುತ್ತಿದ್ದರು. ಶುಕ್ರವಾರ ಸಂಜೆ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ.
ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net