ಬಿಜಿಎಸ್ ಬಾಲಜಗತ್ ಶಾಲೆಯಲ್ಲಿ ಆಕ್ಷರಾಭ್ಯಾಸ

ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ರಸ್ತೆಯಲ್ಲಿರುವ ಬಿ.ಜಿ.ಎಸ್.ಬಾಲಜಗತ್ ಶಾಲೆಯಲ್ಲಿ ಸೋಮವಾರ ಮಕ್ಕಳಿಗೆ ಶ್ರೀ ಸೋಮೇಶ್ವರನಾಥ ಸ್ವಾಮಿಜಿ ಅಕ್ಷರಭ್ಯಾಸ ಮಾಡಿಸಿದರು.
ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ರಸ್ತೆಯಲ್ಲಿರುವ ಬಿ.ಜಿ.ಎಸ್.ಬಾಲಜಗತ್ ಶಾಲೆಯಲ್ಲಿ ಸೋಮವಾರ ಮಕ್ಕಳಿಗೆ ಶ್ರೀ ಸೋಮೇಶ್ವರನಾಥ ಸ್ವಾಮಿಜಿ ಅಕ್ಷರಭ್ಯಾಸ ಮಾಡಿಸಿದರು.
Published on
ಕೆ.ಆರ್.ಸಾಗರ: ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ರಸ್ತೆಯಲ್ಲಿರುವ ಬಿ.ಜಿ.ಎಸ್.ಬಾಲಜಗತ್ ಶಾಲೆಯಲ್ಲಿ ಸೋಮವಾರ ಶಾಲೆಗೆ ನೂತನವಾಗಿ ದಾಖಲಾಗಿರುವ ಮಕ್ಕಳಿಗೆ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಕಾರ್ಯದರ್ಶಿ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅಕ್ಷರಭ್ಯಾಸ ಮಾಡಿದರು.
ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಮಾರ್ಗದರ್ಶನದಲ್ಲಿ ಸರಸ್ವತಿ ದೇವಿ ಹಾಗೂ ಲೇಖನ ಸಾಮಗ್ರಿಗಳಿಗೆ ಪಾಲಕರು ಪೂಜೆ ಸಲ್ಲಿಸಿದರು. ನಂತರ ತಮ್ಮ ಮಕ್ಕಳ ಜೊತೆ ಕುಳಿತು ಪೂಜೆ ಸಲ್ಲಿಸಿದ ತಟ್ಟೆಯಲ್ಲಿದ್ದ ಅಕ್ಕಿಯಲ್ಲಿ ಓಂಕಾರ ಬರೆಸುವ ಮೂಲಕ ಅಕ್ಷರಾಭ್ಯಾಸ ನಡೆಸಿದರು.
ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಇಂದು ನಮ್ಮ ಮಕ್ಕಳಲ್ಲಿ ಸಂಸ್ಕಾರ ಬೆಳೆಸಬೇಕಾಗಿದೆ. ಇದಕ್ಕೆ ಪಾಲಕರು ಸಂಸ್ಕೃತಿ ಪಾಲನೆ ಮಾಡುವುದು ಅಗತ್ಯವಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಅಕ್ಷರಭ್ಯಾಸ ಮಾಡಿಸಿ ಉತ್ತಮ ಪ್ರಜೆಯಾಗಬೇಕೆಂಬ ಆಸೆ ಹೊಂದಿರುತ್ತಾರೆ. ಕೇವಲ ಶಾಲೆಗೆ ಕಳುಹಿಸಿದ ಮಾತ್ರಕ್ಕೆ ಪಾಲಕರ ಪಾತ್ರ ಮುಗಿಯುವುದಿಲ್ಲ. ತಂದೆ-ತಾಯಿಯೇ ಮಕ್ಕಳಿಗೆ ಮೊದಲ ಗುರು. ಪಾಲಕರು ಮಕ್ಕಳ ಚಟುವಟಿಕೆ ಬಗ್ಗೆ ಪ್ರತಿದಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಮುಖ್ಯ ಶಿಕ್ಷಕಿ ಕೆ.ಆಶಾ, ಕಚೇರಿ ಸಹಾಯಕ ಅಭಿ, ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net