ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಪರಿಸರ ದಿನಾಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ಹಲವು ಚಿತ್ರಗಳನ್ನು ಪ್ರದರ್ಶಿಸಿದರು. ಶಾಲಾ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು. ಬಿಜಿಎಸ್ ಶಿಕ್ಷಣ ಸಂಸ್ಥೆಯ ಕಾರ‌್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ, ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್, ಬಿಜೆಪಿ ಮುಖಂಡ ಎಚ್.ಎನ್.ಮಂಜುನಾಥ್, ಗೃಹ ನಿರ್ಮಾಣ ಮಂಡಳಿ ನಿರ್ದೇಶಕ ಬಿ.ಎಸ್.ಜಯರಾಮು, ರೈತಸಂಘದ ಮಹಿಳಾ ಅಧ್ಯಕ್ಷೆ ರೂಪನಿತೀನ್, ಪ್ರಾಂಶುಪಾಲ ರಘು, ಮುಖ್ಯಶಿಕ್ಷಕಿ ಚಂಪ ಇದ್ದರು.