ಪಾಂಡವಪುರ: ಸರ್ಕಾರಿ ಜಮೀನನ್ನು ಖಾಸಗಿ ಧಾರ್ಮಿಕ ಸಂಸ್ಥೆಗೆ ಅಕ್ರಮವಾಗಿ ಮಾರಾಟ ಮಾಡಿರುವ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳ ತಂಡ ಉಪವಿಭಾಗಾಧಿಕಾರಿ ಕಚೇರಿಗೆ ಶುಕ್ರವಾರ ಭೇಟಿ ನೀಡಿ, ದಾಖಲೆ ಪರಿಶೀಲನೆ ನಡೆಸಿತು.
ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿನ ಸರ್ಕಾರಿ ಜಮೀನಿನನ್ನು ಅಕ್ರಮವಾಗಿ ಧಾರ್ಮಿಕ ಸಂಸ್ಥೆವೊಂದಕ್ಕೆ ಮಾರಾಟ ಮಾಡಿರುವುದಾಗಿ ಇತ್ತೀಚೆಗೆ ಉಪಲೋಕಾಯುಕ್ತರಿಗೆ ದೂರು ಸಲ್ಲಿಸಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪಾಂಡವಪುರ ಉಪವಿಭಾಗಾಧಿಕಾರಿಗಳ ಕಚೇರಿಗೆ ಆಗಮಿಸಿ ಮಾರಾಟ ಮಾಡಿರುವ ಸರ್ಕಾರಿ ಜಮೀನಿಗೆ ಸಂಬಂಧಿಸಿದ ದಾಖಲೆ ಪರಿಶೀಲಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇವಪುರ ಗ್ರಾಪಂ, ಶ್ರೀರಂಗಪಟ್ಟಣ ಪಟ್ಟಣ ತಾಲೂಕು ಕಚೇರಿಗೂ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿತ್ತು. ಮೂರು ಗಂಟೆಗಳಿಗೂ ಅಧಿಕ ಕಾಲ ಕೂಲಂಕಷವಾಗಿ ಪರಿಶೀಲನೆ ನಡೆಯಿತು.
ಲೋಕಾಯುಕ್ತ ಇನ್‌ಸ್ಪೆಕ್ಟರ್ ಲೇಪಾಕ್ಷಮೂರ್ತಿ, ಸಿಬ್ಬಂದಿ ದಿನೇಶ್, ರಾಮಲಿಂಗ, ಯೋಗೇಶ್ ಇದ್ದರು.