ನಿರ್ದೇಶಕರಾಗಿ ಎಂ.ನಂದೀಶ್ ಅವಿರೋಧ ಆಯ್ಕೆ

ಜಿಲ್ಲಾ ಸಹಕಾರ ಒಕ್ಕೂಟದ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆಯಾದ ಎಂ.ನಂದೀಶ್ ಅವರನ್ನು ಅಭಿನಂದಿಸಲಾಯಿತು. ಬಿ.ಬೋರೇಗೌಡ, ಎಂ.ಎಲ್.ದಿನೇಶ್, ಸೋಮ ಸುಂದರ್ ಇದ್ದರು.
ಜಿಲ್ಲಾ ಸಹಕಾರ ಒಕ್ಕೂಟದ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆಯಾದ ಎಂ.ನಂದೀಶ್ ಅವರನ್ನು ಅಭಿನಂದಿಸಲಾಯಿತು. ಬಿ.ಬೋರೇಗೌಡ, ಎಂ.ಎಲ್.ದಿನೇಶ್, ಸೋಮ ಸುಂದರ್ ಇದ್ದರು.
Published on
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಟಿಎಪಿಸಿಎಂಎಸ್ ಹಾಲಿ ನಿರ್ದೇಶಕ ಎಂ.ನಂದೀಶ್ ಅವಿರೋಧ ಆಯ್ಕೆಯಾದರು.
ಜಿಲ್ಲೆಯ ಪಿಕಾಡ್ 9 ಬ್ಯಾಂಕ್‌ಗಳು, ಎಪಿಸಿಎಂಎಸ್ ಹಾಗೂ ಟಿಎಪಿಸಿಎಂಎಸ್ ವಿಭಾಗದಿಂದ ಜಿಲ್ಲಾ ನಿರ್ದೇಶಕ ಸ್ಥಾನಕ್ಕೆ ಜಿಲ್ಲೆಯ ವಿವಿಧ ತಾಲೂಕಿನಿಂದ ಒಟ್ಟು 6 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ ಎಂ.ನಂದೀಶ್ ಹೊರತುಪಡಿಸಿ ಉಳಿದವರು ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾದರು.
ಮನ್ಮುಲ್ ನಿರ್ದೇಶಕ ಬಿ.ಬೋರೇಗೌಡ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಎಂ.ಎಲ್.ದಿನೇಶ್, ಕಸಬಾ ಸೊಸೈಟಿ ಮಾಜಿ ಅಧ್ಯಕ್ಷ ಸೋಮಸುಂದರ್, ಶ್ರೀರಂಗನಾಥ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರು ನಾಗೇಂದ್ರ ದತ್ತ, ಸಂತಕಸಲಗೆರೆ ರುದ್ರಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net